ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಜೊತೆ ಸರ್ಕಾರಗಳ ಚೆಲ್ಲಾಟ: ಆರೋಪ

Last Updated 13 ಮೇ 2017, 8:25 IST
ಅಕ್ಷರ ಗಾತ್ರ

ಪಾವಗಡ: ಸತತ ಬರಗಾಲದಿಂದ ತತ್ತರಿಸಿರುವ ರೈತರ ಸಾಲ ಮನ್ನಾ ಮಾಡದೆ ಸರ್ಕಾರ ಅವರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ಹಸಿರು ಸೇನೆ ಶಿರಾ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಆರೋಪಿಸಿದರು.

ಪಟ್ಟಣದಲ್ಲಿ ಹಸಿರು ಸೇನೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಭಾಷಣಗಳಲ್ಲಿ ರೈತರ ಪರ ಕೆಲಸ ಮಾಡುವುದಾಗಿ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ರೈತರಿಗೆ ಅನುಕೂಲವಾಗುವ ಯೋಜನೆ ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಬೆಳೆ ನಷ್ಟ ಪರಿಹಾರ ಹಣ ರೈತರ ಖಾತೆಗೆ ಸರಿಯಾಗಿ ಪಾವತಿಯಾಗುತ್ತಿಲ್ಲ. ಬೆಳೆ ವಿಮೆ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ದೂರಿದರು.

ವರ್ಗಾಯಿಸುವಲ್ಲಿ ಕಾಲ ಹರಣ ಮಡುತ್ತಿವೆ ಎಂದು ದೂರಿದರು. ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಕುಡಿಯುವ ನೀರಿಗಾಗಿ ಜನತೆ ಪರದಾಡುತ್ತಿದ್ದಾರೆ. ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೇ 16ರಿಂದ ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಅನಿರ್ದಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.ರೈತ ಮುಖಂಡರಾದ ತಿಮ್ಮರಾಯಪ್ಪ, ವಿಜಯಕುಮಾರ್, ನರಸಿಂಹಪ್ಪ, ಲಕ್ಷ್ಮಣಗೌಡ್ರು, ಕುರಿ ಮಲ್ಲಪ್ಪ, ಜಯರಾಂ, ವೆಂಕಟೇಶ್, ರವಿ, ಗೋಪಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT