ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾದಾಯಿ: ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯ

Last Updated 13 ಮೇ 2017, 9:07 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಳಸಾ–ಬಂಡೂರಿ ಮತ್ತು ಮಹಾದಾಯಿ ನದಿ ಯೋಜನೆ ಸಮಸ್ಯೆ ಇತ್ಯರ್ಥಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾ ಯಿಸಿ ಕಳಸಾ–ಬಂಡೂರಿ ಹೋರಾಟ ಸಮನ್ವಯ ಸಮಿತಿ ಸದಸ್ಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ಸಂಸದ ಪ್ರಹ್ಲಾದ ಜೋಶಿ ಹಾಗೂ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್‌ ವಿರುದ್ಧ ಘೋಷಣೆ ಕೂಗಿ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಜೊತೆ ಚರ್ಚಿಸಿ ಮಹಾದಾಯಿ ಸಮಸ್ಯೆ ಬಗೆಹರಿಸಲಾ ಗುವುದು ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಆದರೆ, ಇದುವ ರೆಗೂ ಅವರೊಂದಿಗೆ ಚರ್ಚೆ ನಡೆಸಿಲ್ಲ. ಅಲ್ಲದೆ, ಗೋವಾದಲ್ಲಿ ಅವರದೇ ಸರ್ಕಾರ ಇದ್ದು, ಮುಖ್ಯಮಂತ್ರಿ ಮನೋಹರ ಪರಿಕ್ಕರ್‌ ಅವರೊಂದಿಗೆ ಇದುವರೆಗೂ ಮಾತುಕತೆ ನಡೆಸಿ, ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಮಹಾದಾಯಿ ಯೋಜನೆ ಜಾರಿಗೆ ರೈತರು, ಕನ್ನಡಪರ ಸಂಘಟನೆಗಳು ನಿರಂತರ ಹೋರಾಟ ನಡೆಸಿದರೂ ಅದಕ್ಕೆ ರಾಜಕಾರಣಿಗಳು ಸೊಪ್ಪು ಹಾಕುತ್ತಿಲ್ಲ. ಜನಪ್ರತಿನಿಧಿಗಳು ಜನರ ಕಷ್ಟ ಅರ್ಥ ಮಾಡಿಕೊಂಡು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ರಾಗಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರ ದೊಂದಿಗೆ ಮಾತುಕತೆ ನಡೆಸಲಾಗು ವುದು ಎಂದು ಹೇಳುವ ಮೂಲಕ ದಿನ ದೂಡುತ್ತಾ ಬಂದಿದೆ. ರಾಜ್ಯ ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸ ಬೇಕು’ ಎಂದು ಕಳಸಾ–ಬಂಡೂರಿ ಹೋರಾಟ ಸಮನ್ವಯ ಸಮಿತಿ ಸಂಚಾಲಕ ಅಮೃತ ಇಜಾರಿ ತಿಳಿಸಿದರು.ಸಮಿತಿ ಗೌರವ ಸಂಚಾಲಕ ಶಿವಣ್ಣ ಹುಬ್ಬಳ್ಳಿ ಹಾಗೂ 40ಕ್ಕೂ ಹೆಚ್ಚು ಪದಾ ಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT