ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Last Updated 13 ಮೇ 2017, 10:47 IST
ಅಕ್ಷರ ಗಾತ್ರ

ಮಳವಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪಟ್ಟಣದ ತಾಲ್ಲೂಕು ಕಚೇರಿ ಎದುರು ಶುಕ್ರವಾರ  ಪ್ರತಿಭಟನೆ ನಡೆಸಿದರು.
ಪ್ರಾಂತ ಕೃಷಿಕೂಲಿಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಪುಟ್ಟಮಾದು, ‘ಜಿಲ್ಲೆಯ ರೈತರು ಹಿಂದೆಂದೂ ಕಾಣದ ಬರದಿಂದ ಜನ ಕಂಗೆಟ್ಟಿದ್ದು, ಸಂಕಷ್ಟದಲ್ಲಿರುವ ಕೃಷಿಕರು ಹಾಗೂ ಕೂಲಿಕಾರರ ನೆರವಿಗೆ ಸರ್ಕಾರ ಮುಂದಾಗಬೇಕು.

ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕೂಡಲೇ ಬರಪರಿಹಾರ ನೀಡಬೇಕು. ಬರ ನಿರ್ವಹಣೆಗೆ  ಖರೀದಿಸಿರುವ ಮೇವನ್ನು ರೈತರಿಗೆ ವಿತರಿಸಬೇಕು’ ಎಂದು ಒತ್ತಾಯಿಸಿದರು. ‘ವೃದ್ಧಾಪ್ಯ ವೇತನ, ಸಂಧ್ಯಾಸುರಕ್ಷಾ ಸೇರಿದಂತೆ ಇತರೆ ಮಾಸಾಶನವನ್ನು ಸರಿಯಾಗಿ ನೀಡಲು ಕ್ರಮ ವಹಿಸಬೇಕು.

ಹತ್ತಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಮಾಡುವ ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಬೇಕು. ವಿಳಂಬವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು. ಹಲವು ಬೇಡಿಕೆಗಳ ಮನವಿಯನ್ನು ತಹಶೀಲ್ದಾರ್‌ಗೆ ಅರ್ಪಿಸಿದರು. ಪ್ರತಿಭಟನೆಯಲ್ಲಿ ಸರೋಜಮ್ಮ, ಹನುಮೇಗೌಡ, ಶಿವಮಲ್ಲಯ್ಯ, ಕೆಂಪರಾಜು, ಬಸವಣ್ಣ, ಶಿವಕುಮಾರ್  ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT