ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ 5 ಕ್ಷೇತ್ರಗಳಲ್ಲಿ ಗೆಲುವಿನ ಗುರಿ

Last Updated 14 ಮೇ 2017, 6:16 IST
ಅಕ್ಷರ ಗಾತ್ರ

ಬೈಂದೂರು: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು ಮಾತ್ರ ಬಿಜೆಪಿ ವಶದಲ್ಲಿದೆ. ಮುಂದಿನ ಚುನಾವಣೆಯಲ್ಲಿ 150ಕ್ಕಿಂತ ಅಧಿಕ ಸ್ಥಾನಗಳನ್ನು ಪಕ್ಷ ಗೆಲ್ಲಬೇಕಾದರೆ ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಈ ಜಿಲ್ಲೆಯ ಐದೂ ಸ್ಥಾನಗಳನ್ನು ಪಕ್ಷ ಗಳಿಸಬೇಕು. ಅದಕ್ಕೆ ಜಿಲ್ಲಾ ಕಾರ್ಯ ಕಾರಿಣಿ ಈಗಿನಿಂದಲೇ ಕೆಲಸ ಆರಂಭಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ರಾಜರಾಜೇಶ್ವರಿ ಕಲಾಮಂದಿ ರದಲ್ಲಿ ಶನಿವಾರ ನಡೆದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ‘ಮುಂದಿನ ಚುನಾ ವಣೆಗೆ ರಾಜಕೀಯ ಪಕ್ಷಗಳು ಈಗಲೇ ಬಿರುಸಿನ ಸಿದ್ಧತೆ ನಡೆಸುತ್ತಿವೆ.

ಈ ವಿಚಾರದಲ್ಲಿ ಬಿಜೆಪಿ ಹಿಂದುಳಿಯದು. ನಾನು ರಾಜ್ಯದಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಬಲ ತುಂಬುವ ಕೆಲಸ ಮಾಡುತ್ತಿದ್ದೇನೆ. ಈ ತಿಂಗಳ 18ರಿಂದ 27ರ ವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆ, ಎಸ್‌ಸಿ, ಎಸ್‌ಟಿ ಕಾಲೊನಿ ಭೇಟಿ, ರಾಜಕೀಯ ಪರಿಸ್ಥಿತಿ ಯ ಅವಲೋಕನ, ಸಂಜೆ ಸಾರ್ವಜನಿಕ ಸಭೆ ನಡೆಸಲಾಗುವುದು’ ಎಂದರು.

ಜೂನ್ 15ರಿಂದ ಕಾರ್ಯಕಾರಿಣಿ ಸದಸ್ಯರು ತಮ್ಮದಲ್ಲದ ಕ್ಷೇತ್ರಗಳಿಗೆ ತೆರಳಿ ಸಂಘಟನೆ ಬಲಪಡಿಸುವ ಕೆಲಸ ಮಾಡಬೇಕು. ಕಾರ್ಯಕರ್ತರು ಮನೆಮನೆಗೆ ತೆರಳಿ ರಾಜ್ಯ ಸರ್ಕಾರದ ದುರಾಡಳಿತ, ರಾಜ್ಯದಲ್ಲಿ ನೆಲೆಸಿರುವ ಭ್ರಷ್ಟಾಚಾರ, ಹದಗೆಟ್ಟಿರುವ ಕಾನೂನು ವ್ಯವಸ್ಥೆ, ಕುಂಠಿತಗೊಂಡ ಅಭಿವೃದ್ಧಿ, ಬರ ಎದುರಿಸುವಲ್ಲಿನ ವೈಫಲ್ಯಗಳನ್ನು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯ ಕ್ರಮಗಳನ್ನು ತಿಳಿಸಬೇಕು.

ಮೋದಿ ಆಡಳಿತದಲ್ಲಿ ಹಣದುಬ್ಬರ ದಾಖಲೆ ಕುಸಿತ ಕಂಡಿದೆ. ಜಿಡಿಪಿ ಗಣನೀಯವಾಗಿ ಏರಿಕೆಯಾಗಿದೆ. ಕಾದಿರಿಸಿದ ವಿದೇಶಿ ವಿನಿಮಯ ಮೊತ್ತ ದೊಡ್ಡಪ್ರಮಾಣದಲ್ಲಿ ವೃದ್ಧಿಸಿದೆ. ಜನೆರಿಕ್ ಔಷಧಿ ಬಳಕೆಗೆ ತಂದಿರುವುದರಿಂದ ಔಷಧಿಯ ಬೆಲೆ ಕುಸಿದಿದೆ. ಹೆದ್ದಾರಿ ಕಾಮಗಾರಿ ವೇಗ ಪಡೆದಿದೆ. ಈ ಎಲ್ಲ ಅಂಶಗಳನ್ನು ಜನರಿಗೆ ತಿಳಿಸಬೇಕು ಎಂದು  ಸೂಚಿಸಿದರು.    

ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಪ್ರಮುಖ ನಿರ್ಣಯಗಳನ್ನು ಮಂಡಿಸಿದರು. ಮಾಜಿ ಶಾಸಕ ಕೆ. ರಘುಪತಿ ಭಟ್ ಅನುಮೋದಿಸಿದರು.

ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಯಿಲಾಡಿ ಸುರೇಶ ನಾಯಕ್ ನಿರೂಪಿಸಿದರು. ರಾಷ್ಟ್ರೀಯ ಪರಿಷತ್ ಸದಸ್ಯ ಎಂ. ಕೆ. ವಿಜಯಕುಮಾರ್, ಶಾಸಕ ಸುನೀಲ್‌ಕುಮಾರ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರಾದ ಬಿ. ಎಂ. ಸುಕುಮಾರ ಶೆಟ್ಟಿ, ಉದಯಕುಮಾರ ಶೆಟ್ಟಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನಾ ಗಣೇಶ್, ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯೆ ರೇಷ್ಮಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಯಶಪಾಲ ಸುವರ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT