ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈನಿಂದ ವಾರದ ಆರು ದಿನ ಹಾಲು

Last Updated 14 ಮೇ 2017, 6:18 IST
ಅಕ್ಷರ ಗಾತ್ರ

ಉಡುಪಿ: ಸರ್ಕಾರ ಜನರಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಬಹು ತೇಕ ಮಂದಿಗೆ ಮಾಹಿತಿ ಇಲ್ಲ. ಅಧಿಕಾರಿ ಗಳು ಎಲ್ಲ ಯೋಜನೆಗಳ ಕುರಿತು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು  ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿದ ಪ್ರಯುಕ್ತ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಶನಿವಾರ ಏರ್ಪಡಿಸಿದ್ದ ‘ಜನ ಮನ’ ಫಲಾನುಭವಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನರಿಗಾಗಿಯೇ ಜಾರಿಗೆ ತಂದಿರುವ ಯೋಜನೆಗಳ ಲಾಭ ಅರ್ಹರೆಲ್ಲರಿಗೂ ಸಿಗಬೇಕು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಬಡವರ ಪರವಾಗಿ ಮಾತ್ರ ಕೆಲಸ ಮಾಡುತ್ತಿಲ್ಲ.

ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಎಲ್ಲರಿಗಾಗಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಖ್ಯಮಂತ್ರಿ ಆದ ಅರ್ಧ ಗಂಟೆಯಲ್ಲಿಯೇ ‘ಹಸಿವು ಮುಕ್ತ ಕರ್ನಾಟಕ’ ನಿರ್ಮಾಣ ಮಾಡಲು ಅನ್ನ ಭಾಗ್ಯ ಯೋಜನೆಯನ್ನು ಅವರು ಘೋಷಿಸಿದರು ಎಂದರು.

ರಸ್ತೆ– ಸೇತುವೆ ನಿರ್ಮಾಣ, ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮ ಕೆಲಸಗಳು ನಡೆಯುತ್ತಿವೆ. ಕ್ಷೀರ ಭಾಗ್ಯ ಯೋಜನೆಯಲ್ಲಿ ಪ್ರಸ್ತುತ ವಾರದಲ್ಲಿ ಮೂರು ದಿನ ಮಾತ್ರ ವಿದ್ಯಾರ್ಥಿಗಳಿಗೆ ಹಾಲು ನೀಡಲಾಗುತ್ತಿದ್ದು, ಜುಲೈನಿಂದ ಅದನ್ನು ಆರು ದಿನಗಳಿಗೆ ಹೆಚ್ಚಿಸಲಾಗು ವುದು. ವಿವಿಧ ಬಗೆಯ ಮಾಸಾಶನ ನೀಡಲು ಈಗಾಗಲೇ ವರ್ಷಕ್ಕೆ ₹10 ಸಾವಿರ ಕೋಟಿ ಖರ್ಚು ಮಾಡಲಾಗು ತ್ತಿದೆ.

ಜನರಿಂದ ಬೇಡಿಕೆ ಬಂದಿರುವುದ ರಿಂದ ಮಾಸಾಶನದ ಮೊತ್ತವನ್ನು ಹೆಚ್ಚಿಸುವಂತೆ ಮುಖ್ಯ ಮಂತ್ರಿ ಅವರಿಗೆ ಮನವಿ ಮಾಡಲಾ ಗುವುದು ಎಂದರು.ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಒದಗಿಸಿಕೊಡುವಂತೆ ಅವರು ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿ ಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ, ತಹಶೀಲ್ದಾರ್ ಮಹೇಶ್‌ಚಂದ್ರ, ವಾರ್ತಾಧಿಕಾರಿ ರೋಹಿಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT