ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಂತ್ರಜ್ಞಾನಕ್ಕೆ ತಕ್ಕಂತೆ ಜ್ಞಾನವೃದ್ಧಿಯಾಗಲಿ’

Last Updated 14 ಮೇ 2017, 6:53 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾನೂನು ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ತಕ್ಕಂತೆ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದು   ಹೈಕೋರ್ಟ್‌ ನ್ಯಾಯಮೂರ್ತಿ  ಎಲ್.ನಾರಾಯಣಸ್ವಾಮಿ ಹೇಳಿದರು. ಸಿ. ಭೀಮಸೇನ್ ರಾವ್ ರಾಷ್ಟ್ರೀಯ ಕಾನೂನು ಕಾಲೇಜು ಶನಿವಾರ ಹಮ್ಮಿ ಕೊಂಡಿದ್ದ ಸುವರ್ಣ ಮಹೋತ್ಸವವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ವಿದ್ಯಾರ್ಥಿಗಳು ವಿಶ್ವದ ಆಗುಹೋಗುಗಳನ್ನು ಅರಿಯುವ ಮೂಲಕ ಜಾಗೃತರಾಗಬೇಕು. ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು. ನ್ಯಾಯಾಂಗದಲ್ಲೂ ಕಾಗದರಹಿತ ಆಡಳಿತ ಜಾರಿಯಾಗಿದೆ. ಮನೆಯಲ್ಲೇ ಕುಳಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಇಂತಹ ತಂತ್ರಜ್ಞಾನ ಸಮರ್ಪಕವಾಗಿ ಬಳಸಿಕೊಂಡರೆ ನ್ಯಾಯಾಂಗದ ಭಾಗವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಚಿದಾನಂದ ಎಸ್. ಪಾಟೀಲ್, ಎನ್ಇಎಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ವಿಶ್ವನಾಥ್, ಕಾರ್ಯದರ್ಶಿ ಎಸ್.ಎನ್. ನಾಗರಾಜ್ ಇದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಆರ್. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಅನಲಾ ಸ್ವಾಗತಿಸಿದರು. ಪ್ರೊ. ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT