ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಸಿ.ರೆಡ್ಡಿ ಪ್ರತಿಮೆ ಪ್ರತಿಷ್ಠಾಪನೆ: ಸಿ.ಎಂ ಭರವಸೆ

Last Updated 14 ಮೇ 2017, 8:36 IST
ಅಕ್ಷರ ಗಾತ್ರ

ಸಿಂಧನೂರು:  ವಿಧಾನಸೌಧ ಮುಂಭಾಗದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆ ಪ್ರತಿಷ್ಠಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಕೆ.ಸಿ.ರೆಡ್ಡಿ ಸರೋಜಮ್ಮ ವೆಲ್‌ಫೇರ್ ಫೌಂಡೇಶನ್ ಸಲಹಾ  ಮಂಡಳಿ ಸದಸ್ಯೆ ವಸಂತ ಕವಿತಾ ತಿಳಿಸಿದರು.

ಶನಿವಾರ  ಮಾತನಾಡಿದ ಅವರು, ‘ಕೆ.ಸಿ.ರೆಡ್ಡಿ ಅವರ ಆಡಳಿತಾವಧಿಯಲ್ಲಿ ಆಗಿರುವ  ಅಭಿವೃದ್ಧಿ ಕಾರ್ಯಗಳನ್ನು ಯುವಕರಿಗೆ ಪರಿಚಯಿಸುವ ಉದ್ದೇಶದಿಂದ ಅವರ ಹೆಸರಿನಲ್ಲಿ ಸ್ವಯಂ ಸೇವಾ ಸಂಸ್ಥೆಯನ್ನು ಸ್ಥಾಪಿಸಲಾಗಿದೆ.  ಕೆ.ಸಿ.ರೆಡ್ಡಿ ಪ್ರತಿಮೆ ಪ್ರತಿಷ್ಠಾಪನೆಗೆ ನ್ಯಾಯಾಲಯದ ತೊಡಕು ಇದೆ. ಅದು ನಿವಾರಣೆಯಾದ ಮೇಲೆ ಮೂರ್ತಿ ಪ್ರತಿಷ್ಠಾಪಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ’ ಎಂ ದರು.

‘ವೆಲ್‌ಫೇರ್‌ ಫೌಂಡೇಶನ್‌ನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪರಿಸರ ಜಾಗೃತಿ, ಜನರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ನಿಟ್ಟಿನಲ್ಲಿ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾ ಗುವುದು. ಅಂತರ್ಜಲಮಟ್ಟ ಹೆಚ್ಚಿಸುವ ಉದ್ದೇಶದಿಂದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮಳೆ ನೀರು ಸಂಗ್ರಹ  ಆಂದೋಲನ ಕೈಗೊಳ್ಳುವ ಸಂಕಲ್ಪ ಹೊಂದಲಾಗಿದೆ’ ವಸಂತ ಕವಿತಾ ಹೇಳಿದರು.ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ,  ಸತ್ಯನಗೌಡ ವಳಬಳ್ಳಾರಿ, ಪರ್ವತರೆಡ್ಡಿ, ಮುನಿಯಪ್ಪ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT