ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಧಾನಸಭೆ ಚುನಾವಣೆಗೆ ಸಿದ್ಧತೆ ಕೈಗೊಳ್ಳಿ’

Last Updated 15 ಮೇ 2017, 5:35 IST
ಅಕ್ಷರ ಗಾತ್ರ
ಬಸವಕಲ್ಯಾಣ: ‘ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದು, ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಈ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಜಯಗಳಿಸುವಂಥ ಅನುಕೂಲಕರ ಪರಿಸ್ಥಿತಿ ನಿರ್ಮಾಣ ಮಾಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ ಹೇಳಿದರು.
 
ಇಲ್ಲಿನ ಡ್ರೀಮ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
 
‘ಪಕ್ಷದ ಕೆಲಸವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದವರಿಗೆ ಮಾತ್ರ ವಿಧಾನಸಭೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ದೊರಕಲಿದೆ. ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೆ ನಿಷ್ಠಾವಂತರಿಗೆ ಮತ್ತು ಉತ್ತಮರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.
 
ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕಾರ್ಯವೈಖರಿಯಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿಯೂ ಅವರ ಪ್ರಭಾವ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಇನ್ನೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕಾಗಿದೆ’ ಎಂದು ಹೇಳಿದರು.
 
‘ಸಿದ್ದರಾಮಯ್ಯನವರು ಜನಪರ ಯೋಜನೆಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಎಲ್ಲೆಡೆ ಭ್ರಷ್ಟಾಚಾರ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರೆದುರಿಗೆ ಎತ್ತಿ ತೋರಿಸಬೇಕು’ ಎಂದು ಸಲಹೆ ನೀಡಿದರು.
 
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯ ಮಾಡಬೇಕಾಗಿದೆ. ಆದ್ದರಿಂದ ಗ್ರಾಮ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಲೂ  ಪ್ರಯತ್ನಿಸಬೇಕು’ ಎಂದರು.
 
ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ್, ಮಾಜಿ ಶಾಸಕರಾದ ರಾಜೇಂದ್ರ ವರ್ಮಾ, ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ್ ಹಾಗೂ ಅಮರನಾಥ ಪಾಟೀಲ, ಸಂಜಯ ಪಟವಾರಿ, ಸುನಿಲ ಪಾಟೀಲ, ಶೋಭಾವತಿ ತೆಲಂಗ್, ಶಂಕರ ನಾಗದೆ, ಶಿವಪುತ್ರ ಗೌರ, ಬಸವರಾಜ ಆರ್ಯ, ಜಯಕುಮಾರ ಕಾಂಗೆ, ಸೋಮನಾಥ ಪಾಟೀಲ  ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT