ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟ ಸಹಕಾರಿ

ತಾಕೇರಿ ಗ್ರಾಮದಲ್ಲಿ ನಡೆದ ವಾಲಿಬಾಲ್‌ ಟೂರ್ನಿ
Last Updated 15 ಮೇ 2017, 7:18 IST
ಅಕ್ಷರ ಗಾತ್ರ
ಸೋಮವಾರಪೇಟೆ: ‘ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಕ್ರೀಡಾಕೂಟ ಗಳು ಸಹಕಾರಿಯಾಗಿದ್ದು, ಹೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಡೆಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.
 
ಸಮೀಪದ ತಾಕೇರಿ ಗ್ರಾಮದ ಉಮಾಮಹೇಶ್ವರಿ ಗ್ರಾಮಾಭಿವೃದ್ಧಿ ಮಂಡಳಿ ಹಾಗೂ ತಾಕೇರಿ ವಾಲಿಬಾಲ್ ಅಸೋಸಿಯೇಶನ್  ಆಶ್ರಯದಲ್ಲಿ ಭಾನುವಾರ ಗ್ರಾಮದ ಸಮುದಾಯ ಭವನದ ಮೈದಾನದಲ್ಲಿ ಆಯೋಜಿಸಿದ್ದ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.
 
ಎಲೆಮರೆ ಕಾಯಿಯಂತಿರುವ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿ ಸಲು ಗ್ರಾಮೀಣ ಕ್ರೀಡಾಕೂಟಗಳು ಸಹಕಾರಿ. ಹೆಚ್ಚಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಹೆಸರನ್ನು ತಂದಿದ್ದಾರೆ.
 
ಕ್ರೀಡಾ ಕ್ಷೇತ್ರದಲ್ಲಿರುವ ಬಹುತೇಕ ಯುವಕ ಯುವತಿಯರು ಉತ್ತಮ ಹುದ್ದೆಗಳನ್ನು ಅಲಂಕರಿಸಿ, ಬದುಕು ಕಂಡುಕೊಂಡಿದ್ದಾರೆ ಎಂದರು. ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಸೌಲಭ್ಯ ಗಳನ್ನು ಕಲ್ಪಿಸಿ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದರು. 
 
   ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಂ. ಮಹೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ತಾಕೇರಿ ಸತೀಶ್, ಎಪಿಎಂಸಿ ಸದಸ್ಯೆ ಸುಮಿತ್ರ ಪೊನ್ನಪ್ಪ, ಕಿರಗಂದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಬಿ.ಸುರೇಂದ್ರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಪಿ.ಮುತ್ತಣ್ಣ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ  ಉಪಸ್ಥಿತರಿದ್ದರು.
 
ಪುರುಷರ ವಾಲಿಬಾಲ್‌ ಟೂರ್ನಿಯಲ್ಲಿ ಜಿಲ್ಲೆಯ 14 ತಂಡಗಳು, ಮಹಿಳೆಯರ ಥ್ರೋಬಾಲ್‌ನಲ್ಲಿ 4 ತಂಡಗಳು ಭಾಗವಹಿಸಿದ್ದವು. ಹಗ್ಗ ಜಗ್ಗಾಟ, ಗುಡ್ಡಗಾಡು ಓಟದ ಸ್ಪರ್ಧೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT