ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ರಂದು ಪ್ರಜಾವಾಣಿ– ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ

Last Updated 15 ಮೇ 2017, 20:04 IST
ಅಕ್ಷರ ಗಾತ್ರ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಮೇ 20ರಂದು ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹೇರೋಹಳ್ಳಿ 1ನೇ ಹಂತದ ಬಿಇಎಲ್‌ ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಕೇಂದ್ರದಲ್ಲಿ  ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕ ಎಸ್‌.ಟಿ. ಸೋಮಶೇಖರ್‌, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೃಹತ್‌ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾದ ಹತ್ತಾರು ಹಳ್ಳಿಗಳು ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತವೆ. ಇಲ್ಲಿ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.

ಹೀಗಾಗಿ ಸಾರ್ವಜನಿಕರು ತಮ್ಮ ವಾರ್ಡ್‌ಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 20ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ. ಕುಂದುಕೊರತೆಗಳ ಬಗ್ಗೆ ಇ–ಮೇಲ್‌  janaspandana@ printersmysore.co.in ಕೂಡಾ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ: 9448914995 (ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಕರೆ ಮಾಡಬಹುದು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT