ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಗಾಗಿ ಪರದಾಟ

Last Updated 16 ಮೇ 2017, 5:06 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಕಾಕನೂರು ಗ್ರಾಮದಲ್ಲಿ 2 ತಿಂಗಳಿನಿಂದ ಕುಡಿಯುವ ನೀರಿಗೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ಜನಸಂಖ್ಯೆ 1,800ಕ್ಕಿಂತ ಹೆಚ್ಚಾಗಿದ್ದು, ಕೊಳವೆಬಾವಿಗಳಲ್ಲಿ ಸಿಗುವ ಕಡಿಮೆ ಪ್ರಮಾಣದ ನೀರು ಸಾಲುತ್ತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಗ್ರಾಮಸ್ಥರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಿದೆ.

ಇದರ ಜತೆಗೆ ವಿದ್ಯುತ್ ವ್ಯತ್ಯಯವೂ ಉಂಟಾಗುತ್ತಿದೆ. ಹೀಗಾಗಿ ನೀರು ಬಿಟ್ಟಾಗ  ತುಂಬಿಕೊಳ್ಳಲು ಕೊಡಪಾನ ಗಳನ್ನು ತಳ್ಳುವ ಗಾಡಿ, ಸೈಕಲ್‌, ದ್ವಿಚಕ್ರವಾಹನದಲ್ಲಿ ಹೊತ್ತುಕೊಂಡು ಹೋಗುವ ಪರಿಸ್ಥಿತಿ ಇದೆ ಎನ್ನುತ್ತಾರೆ ಗ್ರಾಮದ ಯೋಗೇಶ್‌, ತಿಪ್ಪೇಸ್ವಾಮಿ.

‘ಈ ಗ್ರಾಮದಲ್ಲಿ ನಾಲ್ಕು ಕೊಳವೆಬಾವಿಗಳನ್ನು ಕೊರೆಸಿದ್ದೆವು. ಆದರೆ, ಮೂರರಲ್ಲಿ ಮಾತ್ರ ಅರ್ಧ ಇಂಚಿನಷ್ಟು ನೀರು ಸಿಕ್ಕಿದೆ. ಅದನ್ನು ಟ್ಯಾಂಕ್‌ಗೆ ಸಂಗ್ರಹಿಸಿ ವಾರ್ಡ್‌ಗಳಿಗೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ.

ಆದ್ದರಿಂದ ಕೊಳವೆಬಾವಿ ಬಳಿಯೇ ಪೈಪ್‌ ಮೂಲಕ ನೀರು ಸರಬರಾಜು ಮಾಡಲು ಇಲಾಖೆ ವ್ಯವಸ್ಥೆ ಮಾಡಿದೆ’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ಗ್ರಾಮ ನೈರ್ಮಲ್ಯ ಇಲಾಖೆ ಎಇಇ ಜಿ.ನ್.ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT