ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಸ್ಯರ ನಡುವೆ ನೂಕಾಟ; ಲಾಠಿ ಪ್ರಹಾರ

Last Updated 16 ಮೇ 2017, 6:47 IST
ಅಕ್ಷರ ಗಾತ್ರ

ರಾಮನಗರ: ಕಾಂಗ್ರೆಸ್‌ನ ಯುವ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮತದಾನ ನಡೆಯಿತು. ಈ ಸಂದರ್ಭ ಗದ್ದಲ ಉಂಟಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಮಧ್ಯಾಹ್ನ 3 ಗಂಟೆಗೆ ಚುನಾವಣೆಯ ಮುಗಿಯುವ ಸಂದರ್ಭದಲ್ಲಿ ಮತದಾನ ಮಾಡಲು ಬಂದಿದ್ದ ಸದಸ್ಯರಲ್ಲಿ ಗೊಂದಲ ಉಂಟಾಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಳ್ಳಾಟ, ನೂಕಾಟ ಹೆಚ್ಚಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಲಾಠಿ ಬೀಸಿ ಗುಂಪು ಚದುರಿಸಿದರು ಎಂದು ಪ್ರತ್ಯಕ್ಷದರ್ಶಿ ‘ಪ್ರಜಾವಾಣಿ’ಗೆ ತಿಳಿಸಿದರು.

ಚುನಾವಣೆಯ ಸಮಯ ಮುಗಿಯುತ್ತಿದ್ದಂತೆ ಗುಂಪಾಗುಂಪಾಗಿ ಆಗಮಿಸಿದ ಕೆಲವು ಸದಸ್ಯರು ತಮಗೆ ಮತದಾನ ಮಾಡಲು ಅವಕಾಶ ನೀಡಬೇಕು ಎಂದು ಚುನಾವಣಾಧಿ ಕಾರಿಯನ್ನು ವಿನಂತಿಸಿದರು. ಆದರೆ ಚುನಾವಣಾಧಿಕಾರಿ ಅನುಮತಿ ನೀಡದ ಕಾರಣ ಸದಸ್ಯರಲ್ಲಿ ಜಗಳ ಪ್ರಾರಂಭ ವಾಯಿತು ಎಂದು ತಿಳಿಸಿದರು.

‘ಯುವ ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ 8 ಮಂದಿ, ಕಾರ್ಯದರ್ಶಿ ಸ್ಥಾನಕ್ಕೆ 52 ಮಂದಿ, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 4 ಮಂದಿ, ಕಾರ್ಯದರ್ಶಿ ಸ್ಥಾನಕ್ಕೆ 12 ಮಂದಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ 13 ಮಂದಿ ಸ್ಪರ್ಧಿಸಿದ್ದಾರೆ’ ಎಂದು ಚುನಾವ ಣಾಧಿಕಾರಿ ಕೆ. ರಮೇಶ್‌ ತಿಳಿಸಿದರು.

‘ರಾಮನಗರ ತಾಲ್ಲೂಕಿನಲ್ಲಿ 1817 ಸದಸ್ಯರಿದ್ದು, 1119 ಸದಸ್ಯರು ಮತ ಚಲಾಯಿಸಿದ್ದಾರೆ. ಮಾಗಡಿಯಲ್ಲಿ 650 ಸದಸ್ಯರಿದ್ದು 400 ಮಂದಿ ಮತ ಚಲಾಯಿಸಿದ್ದಾರೆ. ಕನಕಪುರದಲ್ಲಿ 11 ಸಾವಿರ ಮತದಾರರಿದ್ದು 4039 ಮಂದಿ ಮತ ಚಲಾಯಿಸಿದ್ದಾರೆ. ಕನಕಪುರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಇದ್ದ ಕಾರಣ ಅರ್ಧಗಂಟೆ ಹೆಚ್ಚಿನ ಸಮಯ ವನ್ನು ಮತ ಚಲಾಯಿಸಲು ನೀಡ ಲಾಗಿತ್ತು’ ಎಂದು ಅವರು ಹೇಳಿದರು.

‘ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ಇದೇ 18ರಂದು ಕಾಂಗ್ರೆಸ್‌ನ ಜಿಲ್ಲಾ ಘಟಕ ಹಾಗೂ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಇದೇ 20 ರಂದು ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್‌ ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮತ ಎಣಿಕೆ ನಡೆಯಲಿದೆ’ ಎಂದು ಅವರು ತಿಳಿಸಿದರು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಎನ್.ಆರ್‌. ವೆಂಕಟೇಶ್, ನಗರಸಭೆ ಅಧ್ಯಕ್ಷ ಪಿ. ರವಿಕುಮಾರ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT