ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೌಶಲ ಗಳಿಕೆಯಲ್ಲಿ ಯುವಕರು ಹಿಂದೆ’

Last Updated 16 ಮೇ 2017, 6:54 IST
ಅಕ್ಷರ ಗಾತ್ರ

ಆನೇಕಲ್‌: ಉನ್ನತ ಪದವಿ ಪಡೆದರೂ ಕೌಶಲ ಗಳಿಸುವಲ್ಲಿ ಯುವಕರು ಹಿಂದುಳಿದಿ ದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿದರೆ ಉದ್ಯೋಗ ದೊರೆ ಯುವುದರ ಜೊತೆಗೆ ದೇಶಕ್ಕೆ ಮಾನವ ಸಂಪನ್ಮೂಲ ದೊರೆಯುತ್ತದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ಅವರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕೌಶಲ ತರಬೇತಿ ಆಕಾಂಕ್ಷಿತ ಯುವಕರು ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಗಳಿಸಿರುವ ಯುವಕರು ತಮಗೆ ಆಸಕ್ತಿಯಿರುವ ಕ್ಷೇತ್ರಗಳಲ್ಲಿ ತರಬೇತಿ ನೀಡಿ ಕೌಶಲಗಳಿಸುವಂತಾಗಲು ಸರ್ಕಾರ ಯುವಕರು ಹಾಗೂ ಯುವತಿಯರಿಗಾಗಿ ತರಬೇತಿ ಕಾರ್ಯಕ್ರಮ ಆಯೋಜಿಸಿದೆ. 18–36 ವರ್ಷ ವಯೋಮಾನದ ಎಲ್ಲರೂ ನೋಂದಣಿ ಮಾಡಿಕೊಳ್ಳಬಹುದು. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾಗಿದ್ದರೂ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ತಹಶೀಲ್ದಾರ್ ಆಶಾ ಪರ್ವೀನ್ ಮಾತನಾಡಿ ತಾಲ್ಲೂಕು ಕಚೇರಿಯಲ್ಲಿ ನಾಲ್ಕು ಕೌಂಟರ್‌ಗಳನ್ನು ತೆರೆಯಲಾಗಿದ್ದು ಮೇ 15ರಿಂದ ಮೇ 25ರವರೆಗೆ ನೋಂದಣಿ ಮಾಡಿಕೊಳ್ಳಲಾಗುವುದು. ವೃತ್ತಿ ಕೌಶಲ ತರಬೇತಿ ನೀಡಿ ಉದ್ಯೋಗ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.

ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನೋಮೇಶ್‌ ಕುಮಾರ್, ವಿಶೇಷ ತಹಶೀಲ್ದಾರ್ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮಹದೇವ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಐ.ಸಿ.ಎಂ.ಕೃಷ್ಣಮೂರ್ತಿ, ಮುಖಂಡ ಆದೂರು ಶ್ರೀನಿವಾಸ್ ಹಾಜರಿದ್ದರು.

**

ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡ ಲಾಗುವುದು. ಆಸಕ್ತ ಯುವ ಜನತೆ ನೋಂದಣಿ ಮಾಡಿಕೊಳ್ಳಬೇಕು
–ಆಶಾ ಪರ್ವೀನ್ ,
ತಹಶೀಲ್ದಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT