ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಪುಣ್ಯ ಪಡೆದವರಿಂದ ಅಭಿವೃದ್ಧಿ ಸಾಧ್ಯ

Last Updated 16 ಮೇ 2017, 9:25 IST
ಅಕ್ಷರ ಗಾತ್ರ

ಯಾದಗಿರಿ: ನೈಪುಣ್ಯ ಪಡೆದ ಯುವಕ ರಿಂದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಜಿಲ್ಲೆಯಲ್ಲಿ ಪದವಿ ಪಡೆದ ಎಲ್ಲಾ ನಿರುದ್ಯೋಗಿ ಯುವರೆ ಅಗತ್ಯ ನೈಪುಣ್ಯತೆ ಪಡೆಯಲು ಹೆಸರನ್ನು ನೋಂದಾಯಿ ಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಶ್ರೀ ಪ್ರಿಯಾಂಕ್ ಎಂ.ಖರ್ಗೆ  ಯುವಜನಾಂಗಕ್ಕೆ ಕರೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮುಖ್ಯಮಂತ್ರಿ ಕೌಶಲ ಕರ್ನಾಟಕ ಯೋಜನೆಯಡಿ ನಿರುದ್ಯೋಗಿ ಯುವಜನ ಕೌಶಲತ ರಬೇತಿಗಾಗಿ ಬೇಡಿಕೆ ಸಮೀಕ್ಷೆ ಮತ್ತು ನೋಂದಣಿ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.

‘ವೆಬ್ ಪೋರ್ಟಲ್‌ಗೆ ಯುವ ಜನರನ್ನು ನೋಂದಣಿ ಮಾಡಿಸುವ ನಿಟ್ಟಿನಲ್ಲಿ ತಹಶೀಲ್ದಾರರು, ಕಾರ್ಮಿಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇನ್ನಿತರ ಅಧಿಕಾರಿಗಳು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕ್ರಮಕೈಗೊಳ್ಳ ಬೇಕು. ಈ ಕೆಲಸಕ್ಕೆ ಆದ್ಯತೆ ನೀಡಿ, ಒಂದು ವಾರದಲ್ಲಿ ಯುವಜನರನ್ನು ನೋಂದಣಿ ಮಾಡಿಸಬೇಕು ಎಂದು ಅವರು ಸೂಚಿಸಿದ ಅವರು, ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಸಹ ಕೈ ಜೋಡಿಸಬೇಕು’ ಎಂದು ಸಲಹೆ ನೀಡಿದರು.

‘ಸಾಕಷ್ಟು ಕಲಿಯುವ, ದುಡಿಯುವ  ಉತ್ಸಾಹ-ಆಸಕ್ತಿ ಯುವಕರಲ್ಲಿ ಇದೆ. ಅವರನ್ನು ಸರಿಯಾದ ದಿಕ್ಕಿನಲ್ಲಿ ಕರೆದೂಯ್ಯಬೇಕು. ಆಗ ಮಾತ್ರ. ಸಮಾಜದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ’ ಎಂದರು.

‘2017–18ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಕೌಶಲಾಭಿವೃದ್ಧಿ ಕಾರ್ಯಕ್ರಮದ ಮೂಲಕ 5ಲಕ್ಷ ಯುವಜನತೆಗೆ ತರಬೇತಿ ನೀಡಲಾ ಗುತ್ತಿದೆ. ಕಾಲೇಜುಗಳಲ್ಲಿ ಕಲಿಯುವ ವಿದ್ಯಾಭ್ಯಾಸ ಮತ್ತು ಕೈಗಾರಿಕೆಗಳ ಕಾರ್ಯವೈಖರಿ  ನಡುವೆ ಭಾರಿ ವ್ಯತ್ಯಾಸವಿದೆ. ಬರೀ ಓದಿದರೆ ಸಾಲದು, ಉದ್ಯೋಗಕ್ಕೆ ಬೇಕಾದ ನೈಪುಣ್ಯತೆ ಪಡೆಯಬೇಕು’ ಎಂದು ಹೇಳಿದರು.

‘ಕೌಶಲ ತರಬೇತಿ ಯೋಜನೆಯಡಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ‘ಯುವ ಯುಗ’ ಎಂಬ ಹೆಸರಿನ ಕಾರ್ಯಕ್ರಮದಡಿ ಯೋಜನೆ ಆರಂಭಿಸಿದೆ. 1.10ಲಕ್ಷ  ಯುವಕರಿಗೆ ಗ್ರಾಫಿಕ್ ಅನಿಮೇಶನ್, ಬಯೋ ಟೆಕ್ನಾಲಜಿ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು’ ಎಂದರು.

‘ದೇಶದಲ್ಲಿ ಆರ್ಥಿಕವಾಗಿ ಸದೃಢ ಹೊಂದಿದ ದೊಡ್ಡ ರಾಜ್ಯ ಕರ್ನಾಟಕ ಎಂದು ಇತ್ತೀಚಿಗೆ ಸಮೀಕ್ಷೆ ತಿಳಿಸಿದೆ. ಇದಕ್ಕೆಲ್ಲಾ ಪ್ರಸಕ್ತ ರಾಜ್ಯ ಸರ್ಕಾರ ಕಾರಣವಾಗಿದೆ. ವಿದೇಶ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಆಗ್ರಸ್ಥಾನದಲ್ಲಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ನೀತಿ-ನಿಯಮಗಳೇ ಕಾರಣವಾಗಿದೆ’ ಎಂದು ಹೇಳಿದರು.

ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪೂರ, ನಗರಸಭೆ ಅಧ್ಯಕ್ಷೆ ಲಲಿತಾ ಮೌಲಾಲಿ ಅನಪೂರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಭಾಷು ಎಸ್. ರಾಠೋಡ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿ, ಜಿಲ್ಲಾಧಿಕಾರಿ ಖುಷ್ಬೂ ಗೋಯಲ್ ಚೌಧರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್  ಇದ್ದರು.

ಲೀಡ್ ಬ್ಯಾಂಕ್‌ ವ್ಯವಸ್ಥಾಪಕ ಎಸ್.ಟಿ. ಖಾದ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ್ ವಿ. ಕುಲಕರ್ಣಿ ಸ್ವಾಗತಿಸಿದರು. ಸಹಾಯಕ ಆಯುಕ್ತ ಡಾ.ಜಗದೀಶ್ವಂದಿಸಿದರು. ಚಂದ್ರಶೇಖರ ಗೋಗಿ ಅವರ ತಂಡದವರು ನಾಡಗೀತೆ ಹಾಡಿದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ  ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT