ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20ರಂದು ‘ಜನ-ಮನ’ ಕಾರ್ಯಕ್ರಮ

Last Updated 16 ಮೇ 2017, 9:35 IST
ಅಕ್ಷರ ಗಾತ್ರ

ಕೊಪ್ಪಳ: ‘ಸರ್ಕಾರದ ಯೋಜನೆಗಳ ಬಗ್ಗೆ ಫಲಾನುಭವಿಗಳ ಅನಿಸಿಕೆ ಪಡೆಯುವ ‘ಜನ-ಮನ’ ಕಾರ್ಯಕ್ರಮ ಮೇ 20ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಹೇಳಿದರು.‌

ಆಯಾ ಇಲಾಖೆಯ ಅಧಿಕಾರಿಗಳು ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು. ಫಲಾನುಭವಿಗಳನ್ನು ಕರೆತರಲು ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು, ಕಾರ್ಯಕ್ರಮದ ಕುರಿತು ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್ ಘಾಳಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ಕೆ.ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸಿ.ಡಿ.ಗೀತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಬಂಡಿವಡ್ಡರ್, ಕೃಷಿ ಇಲಾಖೆ ಉಪ ನಿರ್ದೇಶಕ ವೀರೇಶ್ ಹುನಗುಂದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮೆಹಮೂದ್, ಸರ್ವ ಶಿಕ್ಷಣ ಅಭಿಯಾನದ ಡಿವೈಪಿಸಿ ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT