ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ’

Last Updated 16 ಮೇ 2017, 9:38 IST
ಅಕ್ಷರ ಗಾತ್ರ

ರೋಣ: ‘ನವಜೋಡಿ ಆದರ್ಶ ದಂಪತಿ ಯಾಗಿ ಚಿಕ್ಕ ಚೊಕ್ಕ ಸಂಸಾರ ನಡೆಸ ಬೇಕು. ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳಿಗೆ ಧರ್ಮ, ಸಂಸ್ಕಾರ ದೊಂದಿಗೆ ಉತ್ತಮ ಶಿಕ್ಷಣ ನೀಡುವ ಸಂಕಲ್ಪ ಮಾಡಬೇಕು. ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ’ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು, ತಾಲ್ಲೂಕಿನ ಕೊತಬಾಳ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಮಠಗಳ ಪಾತ್ರ ಹಿರಿದು. ಅದರಲ್ಲಿಯೂ ಉತ್ತರ ಕರ್ನಾಟಕದ ಮಠಗಳ ಪಾತ್ರ ಉತ್ತಮವಾದದ್ದು. ಧರ್ಮ ಭೋದನೆಯ ಜೊತೆಗೆ ಶಿಕ್ಷಣ ಕಲಿತಾಗ ಜೀವನ ನಿರ್ವಹಣೆ ಸುಲಭ ಎನ್ನುವ ದೃಷ್ಟಿಯನ್ನು ಇಟ್ಟುಕೊಂಡು ನೂರಾರು ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡವು. ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣದ ಅವಕಾಶ ದೊರೆಯಿತು’ ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೂದೀಶ್ವರ ಮಹಾಸ್ವಾಮಿಗಳು ಮತ್ತು ಕೊಟ್ಟೂರೇಶ್ವರ ಮಹಾಸ್ವಾಮಿಗಳು ವಹಿಸಿದ್ದರು. ಗುಲಗಂಜಿಮಠದ ಗುರುಪಾದ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು.  ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು, ಅಭಿನವ ಚನ್ನಬಸವ ಮಹಾಸ್ವಾಮಿಗಳು, ಸಿದ್ದೇಶ್ವರ ಸ್ವಾಮಿಗಳು, ಕರಿಬಸವ ಶಿವಾಚಾರ್ಯ ಸ್ವಾಮಿಗಳು, ಸದಾಶಿವ ಶಿವಾಚಾರ್ಯ ಸ್ವಾಮಿಗಳು, ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ನೀಲಕಂಠ ತಾತನವರು, ದೊಡ್ಡ ಬಸವಾರ್ಯ ತಾತನವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT