ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ

Last Updated 17 ಮೇ 2017, 8:50 IST
ಅಕ್ಷರ ಗಾತ್ರ

ಬೈಲಹೊಂಗಲ: ‘ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು. 150 ಕ್ಕೂ ಹೆಚ್ಚು ಸ್ಥಾನ ಗೆದ್ದು ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆ ಆಗಲಿದೆ’ ಎಂದು ಬಿಜೆಪಿ ಜಿಲ್ಲಾ ಗ್ರಾಮೀಣ ಘಟಕ ಅಧ್ಯಕ್ಷ, ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.

ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಭಾರತೀಯ ಜನತಾ ಪಕ್ಷ ಶಿಸ್ತಿನ ಪಕ್ಷವಾಗಿದೆ. ಪಕ್ಷದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಂಘಟಣೆ ಕುರಿತಾಗಿ ಸಂದೇಶ ನೀಡಲು ಪ್ರತಿ 3 ತಿಂಗಳಿಗೊಮ್ಮೆ ರಾಜ್ಯ, ಜಿಲ್ಲೆ, ಎಲ್ಲ ಮಂಡಲಗಳ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ನಾಲ್ಕು ವರ್ಷಗಳ ಕಾಲ ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ಕಾಂಗ್ರೇಸ್ ಸರ್ಕಾರ ಬರ ಕಾಮಗಾರಿಗಳನ್ನು ಪರಿಪೂರ್ಣವಾಗಿ ಕೈಕೊಳ್ಳದೆ ಜನರ, ರೈತರ ಕಣ್ಣಿಗೆ ಮಣ್ಣೆರಚಿದೆ. ರಾಜ್ಯದ ಜನರನ್ನು ವಂಚಿಸುತ್ತಿದೆ’ ಎಂದು ಆರೋಪಿಸಿದರು. ಆಡಳಿತದಲ್ಲಿ ಜನರು ಬದಲಾವಣೆ ಬಯಸಿದ್ದಾರೆ.

ಸ್ವಚ್ಚ, ನಿಷ್ಪಕ್ಷಪಾತದ ಆಡಳಿತ ನೀಡುವ ಬಿಜೆಪಿ ಕಡೆಗೆ ಒಲುವು ತೋರಿದ್ದಾರೆ. ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ವಿದ್ಯಾವಂತ, ನಿರೂದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ, ಫಸಲು ಭಿಮಾ ಯೋಜನೆ ಕುರಿತು ರೈತಾಪಿ ಜನರಿಗೆ ನೆರವು ಕಲ್ಪಿಸಿದೆ. ಈ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟು ಕೇಂದ್ರ ಸರ್ಕಾರದ ಯೋಜನೆಗಳ ಲಾಭ ದೊರಕಿಸಿಕೊಡಬೇಕು’ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರುಪಾದ ಕಳ್ಳಿ, ಧನಂಜಯ ಜಾಧವ, ರಮೇಶ ದೇಶಪಾಂಡೆ, ಕಲೆ, ಸಾಂಸ್ಕೃತಿಕ ಪ್ರಕೋಷ್ಠಾ ಸಂಚಾಲಕ ಸಿ.ಕೆ.ಮೆಕ್ಕೇದ, ಮಂಡಲ ಅಧ್ಯಕ್ಷ ಮಡಿವಾಳಪ್ಪ ಹೋಟಿ ಮಾತನಾಡಿದರು.

ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡತಿ ಮಂಡಲದ ವರದಿ ಮಂಡಿಸಿದರು. ಗೂಳಪ್ಪ ಹೊಸಮನಿ, ಸಿ.ಆರ್.ಪಾಟೀಲ, ರಾಜು ಚಿಕ್ಕನಗೌಡರ, ಚಂದ್ರಶೇಖರ ಚಿನಿವಾಲರ ವೇದಿಕೆಯಲ್ಲಿ ಇದ್ದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪುರಸಭೆ, ಪಕ್ಷದ ವಿವಿಧ ಮೊರ್ಚಾಗಳ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT