ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಕಾಂಗ್ರೆಸ್ ಉಸ್ತುವಾರಿ ಭೇಟಿ ಶೀಘ್ರ

Last Updated 17 ಮೇ 2017, 9:20 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ವೇಣುಗೋಪಾಲ್ ಅವರು ಜಿಲ್ಲೆಗೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎಂದು ಮಾಜಿ ಶಾಸಕ ಸಿರಾಜ್ ಶೇಖ್ ಹೇಳಿದರು.ಸಮೀಪದ ಎಸ್‌ಎಸ್ ಫಾರ್ಮ್‌ ಹೌಸ್‌ನಲ್ಲಿ ನಡೆದ ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.

ಮುಂದಿನ ವರ್ಷ ನಡೆಯುವ  ವಿಧಾನಸಭೆ ಚುನಾವಣೆಯಲ್ಲಿ ಅತ್ಯುತ್ತಮ ಆಡಳಿತ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪುನಾ ಕಾಂಗ್ರೆಸ್‌ ಅಧಿಕಾರದ ಗದ್ದುಗೆಗೆ ಏರಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳದೆ, ಜೆಡಿಎಸ್ ಪಕ್ಷದಿಂದ ಉಚ್ಛಾಟಿತರಾದವರಿಂದ ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ ಅವರು ಶಾಸಕ ಎಸ್‌.ಭೀಮಾನಾಯ್ಕರ ವಿರುದ್ಧ ಕಿಡಿಕಾರಿದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಮಾನಗಳನ್ನು ಕಾಂಗ್ರೆಸ್‌ ಉಸ್ತುವಾರಿ ಗಮನಕ್ಕೆ ತರಲಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಬಯಸುವ ಆಕಾಂಕ್ಷಿಗಳು ಪಕ್ಷದ ಪದಾಧಿಕಾರಿಗಳು ಮತ್ತು ಮತದಾರರೊಂದಿಗೆ ಉತ್ತಮ ಸಂಬಂಧ ಇರಿಸಿಕೊಂಡು ಪಕ್ಷದ ಬಲವರ್ಧನೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಗ್ರಾಮೀಣ ವಿಭಾಗದ ಅಧ್ಯಕ್ಷ ಬಿ.ವಿ.ಶಿವ ಯೋಗಿ ಮಾತನಾಡಿ, ಪಕ್ಷ ನೀಡಿದ ಜವಬ್ದಾರಿಯನ್ನು ನಿಭಾಯಿಸದವರನ್ನು, ಇದುವರೆಗೂ ಒಂದೂ ಸದಸ್ಯತ್ವ ಮಾಡದವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಲಾಗಿದೆ. ಚುನಾವಣೆ ವರ್ಷ ಆಗಿರುವುದರಿಂದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಪಕ್ಷ ಮಾಡಿದ ಸಾಧನೆಗಳನ್ನು ಮತದಾರರಿಗೆ ತಲುಪಿಸಬೇಕು ಎಂದರು.

ಬ್ಲಾಕ್‌ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ನಾಗರಾಜ ಜನ್ನು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು. ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮದ ಉಪಾಧ್ಯಕ್ಷ ಗಾದಿಗ ನೂರು ಹಾಲಪ್ಪ, ಮುಖಂಡ ಬಲ್ಲಾ ಹುಣ್ಸಿ ರಾಮಣ್ಣ, ಪುರಸಭೆ ಸದಸ್ಯ ಅಲ್ಲಾಭಕ್ಷಿ, ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ, ಎಪಿಎಂಸಿ ನಿರ್ದೇಶಕ ನೀಲಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಕುಲ್ಮಿ ರಹೇಮಾನ್, ಸೋಮಪ್ಪನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT