ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ

Last Updated 17 ಮೇ 2017, 12:27 IST
ಅಕ್ಷರ ಗಾತ್ರ

ಕಾಶ್ಮೀರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣಾ ರೇಖೆ ಬಳಿಯ ಬಾಲಕೋಟ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಬುಧವಾರ ಬೆಳಗ್ಗೆ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಬೆಳಗ್ಗೆ 5 ಗಂಟೆ ವೇಳೆಗೆ ಪಾಕಿಸ್ತಾನ ಸೇನೆ ಬಾಲಕೋಟ್‍ನಲ್ಲಿ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಪಡೆಯ ವಕ್ತಾರ ಹೇಳಿದ್ದಾರೆ.

ಮಂಗಳವಾರ ರಾತ್ರಿ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ದಾಳಿ ನಡೆಸಿತ್ತು.

ಶೋಪಿಯಾನ್‍ನಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ ಸೇನೆ: ಶೋಪಿಯಾನ್ ಜಿಲ್ಲೆಯಲ್ಲಿ  ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಭಾರತೀಯ ಸೇನೆ ತಾತ್ಕಾಲಿಕ ಸ್ಥಗಿತಗೊಳಿಸಿದೆ. ಉಗ್ರರಿಗಾಗಿ ಶೋಧ ನಡೆಸುತ್ತಿದ್ದ ಸೇನೆಯ ಮೇಲೆ ಅಲ್ಲಿನ ಪುಂಡರು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT