ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ: ಆರ್‌ಜೆಡಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಆರು ಮಂದಿಗೆ ಗಾಯ
Last Updated 17 ಮೇ 2017, 14:38 IST
ಅಕ್ಷರ ಗಾತ್ರ
ಪಟ್ನಾ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಇಲ್ಲಿನ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಮಾರಾಮಾರಿ ನಡೆದಿದ್ದು, ಆರು ಮಂದಿಗೆ ಗಾಯವಾಗಿದೆ.
 
ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬ ಬೇನಾಮಿ ಆಸ್ತಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕಂದಾಯ ಇಲಾಖೆಯ ಅಧಿಕಾರಿಗಳು ನವದೆಹಲಿಯ ಸುತ್ತಮುತ್ತಲಿನ 22 ಸ್ಥಳದಲ್ಲಿ ದಾಳಿ ನಡೆಸಿದ್ದರು. 
 
ಆರ್‌ಜೆಡಿ ಕಾರ್ಯಕರ್ತರು  ಬಿಹಾರದ  ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ವಿರುದ್ಧ ಘೋಷಣೆ ಕೂಗಿದಾಗ ಎರಡು ಪಕ್ಷಗಳ ನಡುವೆ ಘರ್ಷಣೆ ಭುಗಿಲೆದ್ದಿದೆ. 
 
ಕಂದಾಯ ಇಲಾಖೆ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಹಾಗೂ ಅವರ ಕುಟುಂಬ ಪ್ರಕರಣದಲ್ಲಿ ಭಾಗಿಯಾಗಿರುವುದರ ಬಗ್ಗೆ ದಾಖಲೆಗಳು ಇವೆ. ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
 
ಈ ಬಗ್ಗೆ ಪ್ರತಿಕ್ರಿಯಿಸಿದ ಸುಶೀಲ್ ಕುಮಾರ್ ಮೋದಿ ಅವರು ಕಂದಾಯ ಅಧಿಕಾರಿಗಳ ಕಾರ್ಯವನ್ನು ಸಮರ್ಥಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT