ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವೀಧರರೇ ಗಮನಿಸಿ: ಎಸ್‌ಎಸ್‌ಸಿ ಸಿಜಿಎಲ್‌ ಪರೀಕ್ಷೆಗೆ ಆಹ್ವಾನ

ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಅವಕಾಶ
Last Updated 17 ಮೇ 2017, 17:25 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಕಾರ್ಯನಿರ್ವಹಿಸುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) 2017ರ ಕಂಬೈನ್ಡ್‌ ಗ್ರ್ಯಾಜುಯೆಟ್‌ ಲೆವೆಲ್‌ (ಸಿಜಿಎಲ್‌)ಪರೀಕ್ಷೆಗೆ ಆಹ್ವಾನಿಸಿದೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆ  ಹಾಗೂ ಸಚಿವಾಲಯಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಸಿಜಿಎಲ್‌ ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಲು ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.

30ಕ್ಕೂ ಹೆಚ್ಚು ವಿಭಾಗಗಳಲ್ಲಿ ಗ್ರೂಪ್‌ ಬಿ ಮತ್ತು ಸಿ ವರ್ಗಗಳ ಹಲವು ಹುದ್ದೆಗಳಿವೆ.
–––––––––
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್‌ 16
ವೆಬ್‌ಸೈಟ್‌: www.ssc.nic.in.

ವೇತನ:
ಗ್ರೂಪ್‌ ಬಿ– ₹9,300–34,800+ ಗ್ರೇಡ್‌ ಪೇ(₹4200–5400)
ಗ್ರೂಪ್‌ ಸಿ– ₹5,200–20,200+ಗ್ರೇಡ್‌ ಪೇ(₹1800–2800)
–––––––––
ಅರ್ಜಿ ಸಲ್ಲಿಕೆ:
ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ₹100 ಅರ್ಜಿ ಶುಲ್ಕ ಪಾವತಿಸಬೇಕು. ಮಹಿಳೆ, ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ:
ನಾಲ್ಕು ಹಂತಗಳಲ್ಲಿ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಟೈರ್‌ 1, 2 , ವಿವರಾತ್ಮವಾಗಿ ಬರೆಯುವ ಟೈರ್‌ 3 ಹಾಗೂ ದಾಖಲೆ ಪರಿಶೀಲನೆ ನಡೆಸುವ ಟೈರ್‌ 4. ಕೆಲ ಹುದ್ದೆಗಳಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಪಡೆಯುವ ಅಂಕಗಳು ಹಾಗು ಕೌಶಲ ಪರೀಕ್ಷೆಗಳ  ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ಕನಿಷ್ಠ 18 ಹಾಗೂ ಗರಿಷ್ಠ 32 ವರ್ಷ. ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿಯಲ್ಲಿ ಬದಲಾವಣೆಯಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ  ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.

ಅರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಿಬಿಐ/ಎನ್‌ಐಎ ಎಸ್‌ಐ ಹುದ್ದೆಗಳಿಗೆ ನಿಗದಿಯಾಗಿರುವ ದೇಹದಾರ್ಢ್ಯತೆ–  ಪುರುಷರು 160 ರಿಂದ 170 ಸೆಂ.ಮೀ.  ಎತ್ತರ. ಮಹಿಳಾ ಅಭ್ಯರ್ಥಿಗಳು 150 ಸೆಂ.ಮೀ. ಎದೆಯ ಸುತ್ತಳತೆ 76 ಸೆಂ.ಮೀ. ಹೊಂದಿರಬೇಕು.

ಪರೀಕ್ಷಾ ಕೇಂದ್ರ:
ರಾಜ್ಯದ ಅಭ್ಯರ್ಥಿಗಳು ಬೆಂಗಳೂರು, ಧಾರವಾಡ, ಕಲಬುರ್ಗಿ, ಮಂಗಳೂರು ಅಥವಾ ಮೈಸೂರು ಕೇಂದ್ರಗಳನ್ನು ಪರೀಕ್ಷೆಗೆ ಆಯ್ಕೆ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT