ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲು ಬಹಿರ್ದೆಸೆ ಮುಕ್ತ ಗ್ರಾಮಕ್ಕೆ ಆದ್ಯತೆ ನೀಡಿ

Last Updated 19 ಮೇ 2017, 6:25 IST
ಅಕ್ಷರ ಗಾತ್ರ

ಕುಷ್ಟಗಿ: ಸ್ವಚ್ಛ ಭಾರತ ಮಿಷನ್‌ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದ್ದು, ಮುಂದಿನ ಅಕ್ಟೋಬರ್‌ ತಿಂಗಳ ಒಳಗಾಗಿ ತಾಲ್ಲೂಕಿನ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತವಾಗುವ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ. ಮೋಹನ್‌ ಸೂಚಿಸಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ರಾಮಣ್ಣ ಬಂಡಿಹಾಳ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರತಿಯೊಂದು ಮನೆಗಳಿಗೂ ವೈಯಕ್ತಿಕ ಶೌಚಾಲಯ ನಿರ್ಮಾಣಗೊಳ್ಳಬೇಕು. ಈ ನಿಟ್ಟಿನಲ್ಲಿ ಅಭಿವೃದ್ಧಿ ಅಧಿಕಾರಿಗಳು ಜನರ ಮನವೊಲಿಸಿ ಸಹಾಯಧನದ ನೆರವಿನಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವಂತಾಗಲು ಪ್ರೇರೇಪಿಸುವಂತೆ ಹೇಳಿದರು. ಸ್ವಚ್ಛ ಭಾರತ ಮಿಷನ್‌ ಯೋಜನೆ ಅನುಷ್ಠಾನದಲ್ಲಿ ಪ್ರಗತಿ ಕಾಣದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಯಿತು.

ಅನೇಕ ಗ್ರಾಮಗಳಲ್ಲಿ ವೈಯಕ್ತಿ ಶೌಚಾಲಯ ನಿರ್ಮಾಣಗೊಂಡರೂ ಅವುಗಳನ್ನು ಬಳಕೆ ಮಾಡುತ್ತಿಲ್ಲ. ಕೆಲವರು ಬಚ್ಚಲು ಮನೆಯನ್ನಾಗಿಸಿಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ. ಇನ್ನೂ ಕೆಲವರು ಕಾಟಾಚಾರಕ್ಕೆ ಶೌಚಾಲಯ ನಿರ್ಮಿಸಿಕೊಂಡು ಸರ್ಕಾರದ ಸಹಾಯಧನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ವಿಷಯ ಸಭೆಯಲ್ಲಿ ವ್ಯಕ್ತವಾಯಿತು.

ನರೇಗಾ ಯೋಜನೆ ತಾಲ್ಲೂಕಿನ ಸಹಾಯಕ ನಿರ್ದೇಶಕ ಶಿವಪ್ಪ ಸುಬೇದಾರ, ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT