ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ

Last Updated 19 ಮೇ 2017, 6:32 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರದಿಂದ ದೇವನಹಳ್ಳಿಯ ಮೂಲಕ ರಾಜಧಾನಿ ಬೆಂಗಳೂರಿಗೆ ಸಂಚಾರ ಮಾಡುವ ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಿ, ಪ್ರಯಾಣಿಕರು ಹಾಗೂ ವಾಹನ ಸವಾರರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ವಿಜಯಪುರದ ವೇಣುಗೋಪಾಲ್,  ಹರೀಶ್ ಕುಮಾರ್, ಸಂತೋಷ್, ಅನ್ವರ್ ಮುಂತಾದ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭವಾದ ಮೇಲೆ, ಈ ಭಾಗದಲ್ಲಿ ಸಂಚಾರ ಮಾಡುವ ವಾಹನಗಳ ದಟ್ಟಣೆ ಹೆಚ್ಚಾಗಿದೆ. ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡಲು ಹೋಗುವಂತಹ ಕಾರ್ಮಿಕರ ವಾಹನಗಳು ಸೇರಿದಂತೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರಿನಿಂದ ಶಿಡ್ಲಘಟ್ಟ, ಕೋಲಾರ, ಮುಂತಾದ ಕಡೆಗಳಿಗೆ ದಿನನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ. ದೇವನಹಳ್ಳಿಯಿಂದ ವಿಜಯಪುರಕ್ಕೆ ಬರುವ ಹೆದ್ದಾರಿಗೆ ಹೊಂದಿಕೊಂಡಂತೆ ಯಲಿಯೂರು, ಕೋರಮಂಗಲ,  ಚಿಕ್ಕತತ್ತಮಂಗಲ, ದೊಡ್ಡತತ್ತಮಂಗಲ, ಗಡ್ಡದನಾಯಕನಹಳ್ಳಿ, ಸೇರಿದಂತೆ ಅನೇಕ ಹಳ್ಳಿಗಳಿಂದ ಬರುವ ಜನರು ಹೆದ್ದಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ವೇಗವಾಗಿ ಸಂಪರ್ಕ ಬರುವ ವಾಹನಗಳಿಗೆ ಸಿಕ್ಕಿ ಅನೇಕ ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.

ದೇವನಹಳ್ಳಿಗೆ ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿಯಲ್ಲಿನ ಯಲಿಯೂರು ಗೇಟ್ ನಿಂದ ವಿಜಯಪುರದವರೆಗಿನ ರಸ್ತೆ ‘ಅಪಘಾತ ವಲಯ’ವೆಂದು ಘೋಷಿಸಿ, ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರ ಅನುಕೂಲವಾಗುವಂತೆ ಉತ್ತಮ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಬೇಕು. ವಾಹನಗಳಿಗೆ ವೇಗ ನಿಯಂತ್ರಣ ನಿಗದಿ ಪಡಿಸಬೇಕು. ಹೆದ್ದಾರಿಯಿಂದ ಹಳ್ಳಿಗಳ ಕಡೆಗೆ ತಿರುವು ಪಡೆಯುವಂತಹ ಸ್ಥಳಗಳ ಸಮೀಪದಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಾಣ ಮಾಡಬೇಕು. ಹೆದ್ದಾರಿಯ ಇಕ್ಕೆಲುಗಳಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ವಾಹನಗಳ ಬಗ್ಗೆ ಸಾರಿಗೆ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT