ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬೆ ವಲಯ: ಹುಲಿ ಕಳೇಬರ ಪತ್ತೆ

Last Updated 20 ಮೇ 2017, 4:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯ ಹೆಬ್ಬೆ ವಲಯದ ಕಲ್ಕೊವೆ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡು ಹುಲಿಯ ಕಳೇಬರ ಶುಕ್ರವಾರ ಪತ್ತೆಯಾಗಿದೆ.

ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‌ ಮೋಹನರಾಜ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾರಾಯಣಸ್ವಾಮಿ ಸ್ಥಳಕ್ಕೆ ತೆರಳಿದ್ದಾರೆ.

‘ಅಂದಾಜು 10 ವರ್ಷ ವಯಸ್ಸಿನ ಈ ಹುಲಿಯು ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದು. ಆಹಾರ ಸಿಗದೆ  ಸತ್ತಿರಬಹುದು’ ಎಂದು ಅರಣ್ಯ ಸಿಬ್ಬಂದಿ ಶಂಕೆ ವ್ಯಕ್ತಪಡಿಸಿದ್ದಾರೆ. ಕಳೇಬರದ ಮರಣೋತ್ತರ ಪರೀಕ್ಷೆ ಶನಿವಾರ ನಡೆಯಲಿದೆ.
ಈ ಹುಲಿಯ ಸಾವು ಸಂಶಯಾಸ್ಪದವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT