ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಸದಸ್ಯ ವಶಕ್ಕೆ

Last Updated 20 ಮೇ 2017, 5:06 IST
ಅಕ್ಷರ ಗಾತ್ರ

ವಿಜಯಪುರ: ಇಲ್ಲಿನ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ, ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬಿಜೆಪಿ ಸದಸ್ಯ ಪ್ರಕಾಶ ಮಿರ್ಜಿ ಅವರನ್ನು ಜಲನಗರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೇ 17ರಿಂದ ಪಾಲಿಕೆ ಕಚೇರಿ ಆವರಣದಲ್ಲೇ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಅವರು ತಮ್ಮ ಬೇಡಿಕೆಗೆ ಯಾರೊಬ್ಬರೂ ಸ್ಪಂದಿಸದೇ ಇದ್ದುದರಿಂದ ಬೇಸತ್ತ ಸಿಬ್ಬಂದಿಯನ್ನು ಹೊರ ಕಳುಹಿಸಿ ಶುಕ್ರವಾರ ಕಚೇರಿಗೆ ಬೀಗ ಹಾಕಿದ್ದರು.

ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಮಿರ್ಜಿ ಅವರನ್ನು ವಶಕ್ಕೆ ಪಡೆದರು. ‘ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾಗಿ ಮಹಾನಗರ ಪಾಲಿಕೆ ದೂರು ನೀಡಿದರೆ, ಪ್ರಕರಣ ದಾಖಲಿಸಿಕೊಂಡು ಮಿರ್ಜಿ ಅವರನ್ನು ಬಂಧಿಸಲಾಗುವುದು’ ಎಂದು ಸಿಪಿಐ ಸುನೀಲ ಕಾಂಬಳೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT