ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸಂಸ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ

Last Updated 20 ಮೇ 2017, 5:59 IST
ಅಕ್ಷರ ಗಾತ್ರ

ಚಿಕ್ಕೋಡಿ: ದಲಿತ ಸಂಘಟನೆಗಳ ಆಶೋ ತ್ತರಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಚಿಕ್ಕೋಡಿಯ ಮಿನಿವಿಧಾನಸೌಧದ ಎದುರು ಐದು ದಿನಗಳಿಂದ ನಡೆಸುತ್ತಿರುವ ಅನಿರ್ದಿ ಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸು ತ್ತಿರುವ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಡಳಿತ ಮಂಡಳಿಗೆ ಸೇರಿದ ಪಟ್ಟಣದ ಭಾರತಿ ವಿದ್ಯಾವರ್ಧಕ ಸಂಸ್ಥೆ ಸಿ.ಎಸ್.ಎಸ್.ಪಿ.ಯು ಕಾಲೇಜ್‌ ಅನ್ನು ಮೇಲ್ವರ್ಗದ ವ್ಯಕ್ತಿಯೊಬ್ಬರು ತಮ್ಮ ಹೆಸರಿಗೆ ಮಾಡಿಸಿಕೊಂಡು ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಐದು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಿದರೂ ಸರ್ಕಾರಿ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಸ್ಪಂದಿಸು ತ್ತಿಲ್ಲ ಎಂದು ಆಪಾದಿಸಿ ಶುಕ್ರವಾರ ಬೆಳಿಗ್ಗೆ ಮಿನಿ ವಿಧಾನಸೌಧದಿಂದ ಅರೆಬೆತ್ತಲೆ ಮೆರವಣಿಗೆ ಮೂಲಕ ಡಾ.ಬಿ.ಆರ್. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಲ್ಲಿಂದ ಮತ್ತೆ ಬಸವ ಸರ್ಕಲ್‌ ಮೂಲಕ ಪ್ರತಿಭಟನಾ ಸ್ಥಳಕ್ಕೆ ಬಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ದಲಿತರ ಪರ ನ್ಯಾಯಕ್ಕಾಗಿ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರಿನ ಲ್ಲಿಯೇ ಧರಣಿ ಸತ್ಯಾಗ್ರಹ ನಡೆಸುತ್ತಿ ದ್ದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿ ಗಳಾಗಲಿ ಗಮನ ಹರಿಸದೇ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ’ ಎಂದು ದಲಿತ ಮುಖಂಡ ಬಸವರಾಜ ಢಾಕೆ ಆಪಾದಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಂಜುನಾಥ ಮಾಳಗೆ, ತುಕಾರಾಮ ಘಟ್ಟಿ, ಅಪ್ಪಾ ಸಾಬ್ ತಡಾಕೆ, ರಾಜೇಂದ್ರ ಘಸ್ತಿ ಹಾಗೂ ಚಂದ್ರಕಾಂತ ಹುಕ್ಕೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT