ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಧಾನಸಭೆ ಚುನಾವಣೆಗೆ ಸಿದ್ಧರಾಗಿ’

Last Updated 21 ಮೇ 2017, 6:07 IST
ಅಕ್ಷರ ಗಾತ್ರ

ಬೀದರ್: ವರ್ಷದೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾರ್ಯಕರ್ತರು ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಎಐಸಿಸಿಯ ಹೈದರಾಬಾದ್ ಕರ್ನಾಟಕ ವೀಕ್ಷಕ ಸಾಕೆ ಸೈಲಜನಾಥ ಹೇಳಿದರು.

ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಮುಖಂಡರ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಸಂಘಟನೆಯನ್ನು ಬಲಪಡಿಸಬೇಕು. ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗೆಗೆ ಜನರಲ್ಲಿ ಅರಿವು ಮೂಡಿಸಬೇಕು. ಈ ಮೂಲಕ ರಾಜ್ಯದಲ್ಲಿ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ.  ಈ ಕಾರ್ಯಕ್ಕಾಗಿ ತಂಡಗಳನ್ನು ನಿಯೋಜಿಸಿದ್ದಾರೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಪಕ್ಷ ಮುಂಬರುವ ಚುನಾವಣೆಯಲ್ಲಿಯೂ ಜಯ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳು, ಬೀದರ್ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು. ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಅನ್ವರ್ ಮುಧೋಳ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕಾಜಿ ಅರಶದ್ ಅಲಿ, ಪ್ರಧಾನ ಕಾರ್ಯದರ್ಶಿ ರೋಹಿದಾಸ ಘೋಡೆ ಇದ್ದರು.

ಇದಕ್ಕೂ ಮುನ್ನ ಪಕ್ಷದ ಕಚೇರಿಗೆ ಬಂದ ಸಾಕೆ ಸೈಲಜನಾಥ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕಾಜಿ ಅರಶದ್ ಅಲಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಅಭಿಪ್ರಾಯ ಸಂಗ್ರಹ: ಸಭೆಯ ನಂತರ ಸಾಕೆ ಸೈಲಜನಾಥ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷದ ಸಂಘಟನೆ ಬಲವರ್ಧನೆ ಮತ್ತಿತರ ವಿಷಯಗಳ ಕುರಿತು ಪ್ರತ್ಯೇಕ ಕೋಣೆಯಲ್ಲಿ ಕುಳಿತು ಒಬ್ಬೊಬ್ಬರಿಂದ ಅಭಿಪ್ರಾಯ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT