ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗುಪ್ಪಿ: ಪಿಕೆಪಿಎಸ್ ಕಟ್ಟಡ ಉದ್ಘಾಟನೆ

Last Updated 21 ಮೇ 2017, 7:30 IST
ಅಕ್ಷರ ಗಾತ್ರ

ಯಮಕನಮರಡಿ: ದೇಶದಲ್ಲಿ ಕಳೆದ 70 ವರ್ಷದ ಅವಧಿಯಲ್ಲಿ ಅನೇಕ ರಾಜಕೀಯ ಪಕ್ಷಗಳು ಆಳ್ವಿಕೆ ಮಾಡಿದ್ದರೂ ಯಾರಿಂದಲೂ ಜಿಎಸ್‌ಟಿ ಪದ್ಧತಿ ಜಾರಿಗೆ ತರಲು ಸಾಧ್ಯವಾಗಿ ರಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಅದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ಇಲ್ಲಿಗೆ ಸಮೀಪದ ಕರಗುಪ್ಪಿಯಲ್ಲಿ ಶುಕ್ರವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ತಾಲ್ಲೂಕಿನ ಎಲ್ಲ ಪಿಕೆಪಿಎಸ್ ಮೂಲಕ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿದ್ದಾಗಿ ಅವರು ತಿಳಿಸಿದರು.

ಕಮತ್ಯಾನಟ್ಟಿ ಗುರು ದೇವರು, ಬಸಾಪುರದ ರಾಚಯ್ಯ ಸ್ವಾಮೀಜಿ, ದುರದುಂಡಿ ಪಾಟೀಲ, ಶ್ರೀಶೈಲಪ್ಪ ಮಗದುಮ್ಮ, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಮಾರುತಿ ಅಷ್ಟಗಿ, ಅಮರ ಮಹಾಜನಶೆಟ್ಟಿ, ಬಸವರಾಜ ಮರಡಿ, ಈರಣ್ಣ ಹಾಲದೇವರಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT