ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಮನೆಗೆ ಅಭಿಯಾನ: ಜಿಲ್ಲಾಧಿಕಾರಿ

Last Updated 21 ಮೇ 2017, 8:53 IST
ಅಕ್ಷರ ಗಾತ್ರ

ಉಡುಪಿ: ಕೃಷಿ ಹಾಗೂ ಕೃಷಿಗೆ ಸಂಬಂಧಪಟ್ಟ ಇಲಾಖೆಗಳ ಸಹಯೋಗದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಜೂನ್‌ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹೇಳಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಕೃಷಿ ಅಭಿಯಾನ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂನ್‌ 12ರಿಂದ ಆರಂಭವಾಗುವ ಈ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ವಿವಿಧ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಗತ್ಯ ನೆರವು  ನೀಡಲಿರುವರು.

ಹಾಗೆಯೇ ರೈತರಿಗೆ ಕೃಷಿ ಉತ್ಪಾದಕತೆ ಹೆಚ್ಚಳ, ಹೊಸ ತಾಂತ್ರಿಕತೆಯ ಪರಿಚಯ, ಯಂತ್ರೋಪಕರಣಗಳ ಬಳಕೆ, ಕೃಷಿ ವಿಜ್ಞಾನಿಗಳ ಜೊತೆ ಸಂವಾದ, ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. 

ಈ ಅಭಿಯಾನದಲ್ಲಿ ಪ್ರತಿ ಹೋಬಳಿಯ 2 ಗ್ರಾಮಗಳನ್ನು ದತ್ತು ಪಡೆದು, ಆ ಗ್ರಾಮಗಳಲ್ಲಿ ಅಂರ್ತಜಲ ವೃದ್ಧಿ, ಕೊಳವೆ ಬಾವಿಗಳಿಗೆ ಮರುಪೂರಣ, ಪೈಪ್‌ ಕಾಂಪೋಸ್ಟ್‌ ಇಂಗು ಗುಂಡಿ ನಿರ್ಮಾಣ ಸೇರಿದಂತೆ ಕೃಷಿ ಸಂಬಂಧಿತ ಎಲ್ಲಾ ಯೋಜನೆಗಳನ್ನು ಗ್ರಾಮದಲ್ಲಿ ಅನುಷ್ಠಾನ ಮಾಡಿ ಮಾದರಿ ಕೃಷಿ ಗ್ರಾಮವಾಗಿ ರೂಪಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕೆರೆಗಳು, ಮದಗಗಳು, ನಿರುಪಯುಕ್ತ ಕೊಳವೆ ಬಾವಿಗಳ ವಿವರಗಳನ್ನು ಪಂಚಾಯಿತಿಗಳ ಸಹಕಾರದೊಂದಿಗೆ ಪಡೆದು ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅಂತಹ ಪ್ರದೇಶದಲ್ಲಿ ಕೆರೆ ಸಂಜೀವಿನಿ, ಭೂ ಸಮೃದ್ಧಿ ಯೋಜನೆಯಲ್ಲಿ ಜಲ ಮರುಪೂರಣ ವ್ಯವಸ್ಥೆ ಕೈಗೊಳ್ಳುವಂತೆ ತಿಳಿಸಿದರು.

ಪ್ರಗತಿಪರ ರೈತರ ಅನುಭವಗಳ ಹಂಚಿಕೆ, ಮಣ್ಣು ಪರೀಕ್ಷೆ, ಕೃಷಿ ವಿಜ್ಞಾನಿಗಳಿಂದ ವೈಜ್ಞಾನಿಕ ಕೃಷಿ ಮತ್ತು ನೂತನ ಸಂಶೋಧನೆಗಳ ಕುರಿತು ರೈತರಿಗೆ ಮಾಹಿತಿ ಕಾರ್ಯಕ್ರಮ ಆಯೋಜಿಸಿ.

ಹಾಗೆಯೇ ಕೃಷಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ತಮ್ಮ ಇಲಾಖೆಗಳ ವಿವಿಧ ಯೋಜನೆಗಳ ಕುರಿತು ಮಾಹಿತಿ ಪುಸ್ತಕ ಹಾಗೂ ಸ್ತಬ್ದ ಚಿತ್ರಗಳ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಿ ಎಂದು ಸೂಚಿಸಿದರು.ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್‌ ನಾಯಕ್‌, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಸಂಶೋಧನಾ ನಿರ್ದೇಶಕ ಡಾ. ಹನುಮಂತಪ್ಪ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT