ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಗೈರು: ಅಸಮಾಧಾನ

Last Updated 22 ಮೇ 2017, 4:57 IST
ಅಕ್ಷರ ಗಾತ್ರ

ಬಂಗಾರಪೇಟೆ: ‘ಸಾರ್ವಜನಿಕರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಆದರೆ ಕೆಲ ಅಧಿಕಾರಿಗಳು ಸಭೆಗೆ ಹಾಜರಾಗಿಲ್ಲ’ ಎಂದು ಲೋಕಾಯುಕ್ತ ಡಿವೈಎಸ್‌ಪಿ ಎನ್.ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ಏರ್ಪಡಿಸಿದ್ದ  ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ದೂರು ಸ್ವೀಕರಿಸಿ ಮಾತನಾಡಿ, ‘ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗುವುದು’ ಎಂದರು.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿಧ 7 ಅರ್ಜಿಗಳು ಸಲ್ಲಿಕೆಯಾದವು. ಅವುಗಳ ಪೈಕಿ 5 ಅರ್ಜಿ ಸಭೆಯಲ್ಲಿಯೇ ಇತ್ಯರ್ಥ ಮಾಡಲಾಯಿತು. ಉಳಿಕೆ 2 ಅರ್ಜಿಗಳನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ ಅವರಿಗೆ ನೀಡಿ ಪರಿಶೀಲಿಸುವಂತೆ ಸೂಚಿಸಲಾಯಿತು.

‘ತಾಲ್ಲೂಕಿನ ಮಾಗೊಂದಿ ಗ್ರಾಮ ಪಂಚಾಯಿತಿ ಪಿಡಿಒ ಅವರು ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ. ಸರ್ಕಾರಿ ಆಸ್ತಿ ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಗ್ರಾಮದಲ್ಲಿ ಅಕ್ರಮ ಕಟ್ಟಡಗಳು ನಿರ್ಮಿಸುತ್ತಿರುವುದನ್ನು ತಡೆಯಲು ಕಾಳಜಿ ವಹಿಸುತ್ತಿಲ್ಲ’ ಎಂದು ಗ್ರಾಮಸ್ಥರು ದೂರಿದರು.

ಕೂಡಲೇ ಸ್ಪಂದಿಸಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಒ ಮಂಜುಳಾ ಅವರನ್ನು ಸಭೆಗೆ ಕರೆಸಿ ಕಾನೂನು ರೀತಿ ಕ್ರಮ ಜರುಗಿಸುವಂತೆ ತಿಳಿಸಿದರು. ಪಟ್ಟಣದ ಗಂಗಮ್ಮನ ಪಾಳ್ಯ ಮಾರ್ಗದ ಓಬ್ಬಟ್ಲು ಕರೆ ಆವರಣದಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿವೆ ಎನ್ನುವ ದೂರಿಗೆ ಪ್ರತಿಕ್ರಿಯಿಸಿದ ಲೋಕಾಯುಕ್ತರು ಕೂಡಲೇ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ ಪುರಸಭೆ ಅಧಿಕಾರಿಗೆ ಸೂಚಿಸಿದರು.

‘ಸರ್ಕಾರಿ ಬಾಲಕಿಯರ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗಿದೆ. ಈ ಬಗ್ಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನ ಹರಿಸುತ್ತಿಲ್ಲ’ ಎಂದು ಜೀವಿಕ ರಾಮಚಂದ್ರಪ್ಪ ದೂರಿದರು.

‘ಅಕ್ಷರ ದಾಸೋಹಕ್ಕೆ ಸಂಬಂಧಿಸಿದಂತೆ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ವಂಚಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ದಾಖಲೆ ನೀಡಲು ಪ್ರಾಂಶುಪಾಲರು ನಿರಾಕರಿಸಿದ್ದಾರೆ’ ಎಂದು ಆರೋಪಿಸಿದರು.

ತಹಶೀಲ್ದಾರ್ ಎಲ್.ಸತ್ಯಪ್ರಕಾಶ್, ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಪವನ್ ಕುಮಾರ್, ಸಮಾಜ ಕಲ್ಯಾಣ ಅಧಿಕಾರಿ ಎಂ.ಕೆ.ಶಶಿಕಲಾ, ಬಿಇಒ ಕೆ.ಜಯರಾಜ್‌, ಪುರಸಭೆ ಮುಖ್ಯಾಧಿಕಾರಿ ಶಿವಣ್ಣ, ಅಬಕಾರಿ ನಿರೀಕ್ಷಕಿ ಎಂ.ಆರ್.ಸುಮಾ  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT