ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿವ ನೀರಿನ ಯೋಜನೆಗೆ ಚಾಲನೆ

Last Updated 22 ಮೇ 2017, 5:48 IST
ಅಕ್ಷರ ಗಾತ್ರ

ಹುಣಸಗಿ: ‘ಹುಣಸಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿನ ಗ್ರಾಮೀಣ ಭಾಗದ ಜನರಿಗೆ ಅಗತ್ಯವಾದ ರಸ್ತೆ, ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ ಹೇಳಿದರು.

ಶನಿವಾರ ಹುಣಸಗಿ ಸಮೀಪದ ವಜ್ಜಲ ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಜಿಲ್ಲಾ ಪಂಚಾಯಿತಿ ವತಿಯಿಂದ ಅಂದಾಜು ₹25 ಲಕ್ಷ ವೆಚ್ಚದಲ್ಲಿ 50 ಸಾವಿರ ಲೀಟರ್‌ ಸಾಮರ್ಥ್ಯದ ನೀರಿನ ಟ್ಯಾಂಕ್‌ ನಿರ್ಮಾಣದ ಕಾಮಗಾರಿಯನ್ನು ಆರಂಭಿಸಲಾಗುತ್ತಿದೆ.

ಟ್ಯಾಂಕ್ ನಿರ್ಮಾಣ ಹಾಗೂ ಪೈಪ್‌ಲೈನ್ ಮಾಡಿ ಗ್ರಾಮದ ಎಲ್ಲ ವಾರ್ಡ್‌ಗಳಿಗೂ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವ ಮೂಲಕ ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಡಬೇಕು’ ಎಂದು ಹೇಳಿದರು. 

ಯಾದಗಿರಿ ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ  ರಾಜಶೇಖರಗೌಡ ಪಾಟೀಲ, ಹಿರಿಯ ಮುಖಂಡ ಸಂಗನಗೌಡ ಪಾಟೀಲ ವಜ್ಜಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಾರಾಸಿಂಗ್, ಮುಖಂಡರಾದ ರಾಮನಗೌಡ ಪೊಲೀಸ್ ಪಾಟೀಲ, ಚಂದ್ರಶೇಖರ ಬೋರಮಗುಂಡ ಹಾಗೂ ಮಲ್ಲಣ್ಣ ನಾಗರಾಳ, ಭೀಮಣ್ಣ ದ್ಯಾಮಗುಂಡ, ಉಸ್ಮಾನಸಾಬ್ ರೂಡಗಿ, ಮಹಾಂತೇಶ ಯಾಳಗಿ, ಸಿದ್ದಣ್ಣ ಮೇಟಿ, ಸಹಾಯಕ ಎಂಜಿನಿಯರ್ ಸ್ಫೂರ್ತಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬೂದೆಪ್ಪ ಪವಾರ, ಮಲ್ಲಯ್ಯ ನಾಯ್ಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT