ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿ ಆರ್ ಎಸ್ ಎಸ್ ನ ಮುಖವಾಡ’

Last Updated 22 ಮೇ 2017, 5:52 IST
ಅಕ್ಷರ ಗಾತ್ರ

ಯಾದಗಿರಿ: ‘ಬಿಜೆಪಿ ಆರ್ಎಸ್ಎಸ್‌ನ ಮುಖವಾಡವಾಗಿದ್ದು, ಕೇವಲ ಹಿಂದುತ್ವ ಸಿದ್ಧಾಂತ ಹೇರಿಕೆಯನ್ನೇ ಪಕ್ಷದ ಅಜೆಂಡಾ ಮಾಡಿಕೊಂಡಿದೆ’ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ಡಾ.ಸಾಕೆ ಸೈಲಜಾನಾಥ್  ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾನುವಾರ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತತ್ವ, ಸಿದ್ಧಾಂತಗಳನ್ನು ಬಿಜೆಪಿಯ ಮೂಲಕ ಹೇರಿಕೆ ಮಾಡಲಾಗುತ್ತಿದೆ. ಇದನ್ನು ಜನರು ಅರಿತುಕೊಳ್ಳಬೇಕು’ ಎಂದರು.

‘ಕಾಂಗ್ರೆಸ್ ಮಾತ್ರ ಎಲ್ಲಾ ಜಾತಿ ಜನಾಂಗಗಳನ್ನು ಒಟ್ಟಿಗೆ ಕೊಂಡೊಯ್ಯಲಿದೆ. ಕಾಂಗ್ರೆಸ್ ಜಾತ್ಯತೀತ ನಿಲುವು ಇಂದು ದೇಶಕ್ಕೆ ಅಗತ್ಯ ಇದೆ. ಕಾಂಗ್ರೆಸ್ ಸರ್ಕಾರ ಹಲವು ಯೋಜನೆಗಳು ಜನರಿಗೆ ನೀಡಿದೆ. ಈ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಪಕ್ಷದ ಸಂಘಟನೆಗಾಗಿ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ವಿ.ಗೌತಮ ಮಾತನಾಡಿ,‘ಕಳೆದ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದ್ದು, ಜನರಿಗೆ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಆ ಮೂಲಕ ಮುಂದಿನ ಅವಧಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮರುಸ್ಥಾಪನೆಗೆ ಎಲ್ಲರೂ ದುಡಿಯಬೇಕು’ ಎಂದು ಹೇಳಿದರು.

‘ಜೈವಿಕ ಇಂಧನ ನಿಗಮದ ಅಧ್ಯಕ್ಷ ಬಸವರಾಜ ರಾಮನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸರೆಡ್ಡಿ ಅನಪೂರ, ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರು, ಶ್ರೀನಿವಾಸರೆಡ್ಡಿ ಕಂದಕೂರ, ನಗರಸಭೆ ಉಪಾಧ್ಯಕ್ಷ ಸ್ಯಾಂಸನ್ ಮಾಳಿಕೇರಿ, ಸದಸ್ಯ ಶಂಕರ ರಾಠೋಡ, ಬೀದರ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎ.ಎಂ.ಚಿಲಮನಿ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮರಿಗೌಡ ಹುಲಕಲ, ಮುಖಂಡರಾದ ರಾಹುಲ್ ಅರಕೇರಾ, ರಮೇಶ ಲೋಹಾರ, ಬುಚ್ಚಣ್ಣ ಜೈಗ್ರಾಮ್,   ಸಂಜಯ ಕಾವಲಿ ಇದ್ದರು.

ವಿಪ್‌  ಉಲ್ಲಂಘನೆ:  ಕ್ರಮಕ್ಕೆ  ಆಗ್ರಹ
‘ಈಚೆಗೆ ನಗರಸಭೆ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‌ ಸದಸ್ಯರು ವಿಪ್ ಉಲ್ಲಂಘಿಸಿ ಅನ್ಯ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ನಗರಸಭೆ ಸದಸ್ಯ ಶಂಕರ ರಾಥೋಡ ಆಗ್ರಹಿಸಿದರು.

‘ಪಕ್ಷದ ತತ್ವ ಸಿದ್ಧಾಂತಕ್ಕೆ ಎಲ್ಲರೂ ಬದ್ಧರಾಗಿರಬೇಕು. ವಿಪ್‌ ಉಲ್ಲಂಘಿಸಿ ಪಕ್ಷಕ್ಕೆ ಹಿನ್ನಡೆ ಉಂಟು ಮಾಡುವುದು ಸರಿಯಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಸಾಕೆ ಸೈಲಜಾನಾಥ್ ಸಮಾಧಾನಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT