ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತವು ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರ: ಡೊನಾಲ್ಡ್ ಟ್ರಂಪ್ ಹೇಳಿಕೆ

Last Updated 22 ಮೇ 2017, 9:42 IST
ಅಕ್ಷರ ಗಾತ್ರ

ರಿಯಾದ್: ಭಾರತವು ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಜತೆಗೆ, ಯಾವುದೇ ರಾಷ್ಟ್ರಗಳು ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡಬಾರದು ಎಂದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಸೂಚಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ‘ಅರಬ್‌–ಇಸ್ಲಾಮಿಕ್ – ಅಮೆರಿಕ ಶೃಂಗಸಭೆ’ಯಲ್ಲಿ ಮಾತನಾಡಿದ ಅವರು, ‘ಯುರೋಪ್ ರಾಷ್ಟ್ರಗಳೂ ಭಯೋತ್ಪಾದನೆಯ ಸಮಸ್ಯೆ ಎದುರಿಸುತ್ತಿವೆ. ಆಫ್ರಿಕಾ, ದಕ್ಷಿಣ ಅಮೆರಿಕ, ಭಾರತ, ರಷ್ಯಾ, ಚೀನಾ, ಆಸ್ಟ್ರೇಲಿಯಾ ಸಹ ಭಯೋತ್ಪಾದನೆಯ ಸಂತ್ರಸ್ತ ದೇಶಗಳಾಗಿವೆ’ ಎಂದು ಹೇಳಿದ್ದಾರೆ.

ಮುಸ್ಲಿಮರೇ ಬಹುಸಂಖ್ಯಾತರಾಗಿರುವ 50 ರಾಷ್ಟ್ರಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ಇಸ್ಲಾಮಿಕ್ ಉಗ್ರವಾದವನ್ನು ನಿರ್ಮೂಲನೆ ಮಾಡಲು ಮಧ್ಯಪ್ರಾಚ್ಯ ರಾಷ್ಟ್ರಗಳು ಒಂದಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಟ್ರಂಪ್ ಅವರು ವಿದೇಶದಲ್ಲಿ ಮಾಡಿದ ಮೊದಲ ಭಾಷಣ ಇದಾಗಿದೆ.

‘ಭಯೋತ್ಪಾದನೆಯ ವಿರುದ್ಧದ ಹೋರಾಟ ಪಾಶ್ಚಿಮಾತ್ಯ ದೇಶಗಳ ಮತ್ತು ಇಸ್ಲಾಮ್ ನಡುವಣ ಯುದ್ಧವಲ್ಲ. ಇದು ಒಳ್ಳೆಯದು ಮತ್ತು ಕೆಟ್ಟದರ ನಡುವಣ ಯುದ್ಧ’ ಎಂದು ಟ್ರಂಪ್ ಬಣ್ಣಿಸಿದ್ದಾರೆ.

‘ಇದು ವಿವಿಧ ನಂಬಿಕೆಗಳ ನಡುವಣ ಹೋರಾಟವಲ್ಲ. ಮಾನವನ ಜೀವದ ಜತೆ ಚೆಲ್ಲಾಟವಾಡುವ ಕ್ರೂರ ಅಪರಾಧಿಗಳಿಂದ ಸುರಕ್ಷತೆ ಬಯಸುವ ಜನರನ್ನು ರಕ್ಷಿಸಲು ನಡೆಸುವ ಹೋರಾಟ’ ಎಂದು ಟ್ರಂಪ್ ಹೇಳಿದ್ದಾರೆ. ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಟ್ರಂಪ್ ಆ ದೇಶದ ಜತೆ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT