ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 26ರಿಂದ 900 ನಗರಗಳಲ್ಲಿ 'ಮೋದಿ ಫೆಸ್ಟ್'

Last Updated 22 ಮೇ 2017, 14:16 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಾರಥ್ಯದ ಕೇಂದ್ರ ಸರ್ಕಾರದ ಮೂರು ವರ್ಷಗಳ ಆಡಳಿತದ ಸಂಭ್ರಮಾಚರಣೆಯ ಅಂಗವಾಗಿ ಬಿಜೆಪಿ ದೇಶದ 900 ನಗರಗಳಲ್ಲಿ ಮೋದಿ ಫೆಸ್ಟ್ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ.

ಮೇ 26ರಿಂದ ಜೂನ್ 15, 2017ರ ವರೆಗೆ ದೇಶದಾದ್ಯಂತ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷದ 450 ನಾಯಕರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೋದಿ ಫೆಸ್ಟ್ ಕಾರ್ಯಕ್ರಮದಲ್ಲಿ ಮೋದಿ ಎಂದರೆ  'Making of Developed India (MODI) ಎಂದರ್ಥ.

ಈ ಬಗ್ಗೆ ಮಾಧ್ಯಮದವರಲ್ಲಿ ಮಾತನಾಡಿದ ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ  ಈ ಪ್ರಚಾರ ಕಾರ್ಯಕ್ರಮವು ಮೇ 26ರಿಂದ ಆರಂಭವಾಗಿ ಜೂನ್ 15ಕ್ಕೆ ಮುಗಿಯಲಿದೆ ಎಂದಿದ್ದಾರೆ.

ಗುವಾಹಟಿಯಲ್ಲಿ ಮೇ. 26ರಂದು ಮೋದಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮೋದಿ ಸರ್ಕಾರದ ಸಾಧನೆ ಮತ್ತು ಯೋಜನೆಗಳ ಬಗ್ಗೆ ದೇಶದ ಜನರಿಗೆ ಮಾಹಿತಿ ನೀಡುವುದಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.  ಪ್ರಧಾನ ಮಂತ್ರಿ ಜನಧನ್ ಯೋಜನೆಯ ಮೂಲಕ 25 ಕೋಟಿ ಜನರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಇದರಲ್ಲಿ 7 ಕೋಟಿ ಜನರಿಗೆ ಸಾಲ ಸಿಕ್ಕಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ 2 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ ಸಂಪರ್ಕ ಲಭಿಸಿದೆ ಎಂದು ಸಚಿವೆ ಹೇಳಿದ್ದಾರೆ.

ಕೇಂದ್ರ ಸಚಿವರು, ಸಂಸದರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಫೆಸ್ಟ್ ನಡೆಯಲಿದೆ. ಕೇರಳ, ಅಂಡಮಾನ್ ನಿಕೋಬಾರ್, ಛತ್ತೀಸ್ ಗಢ್,  ಅರುಣಾಚಲ್ ಪ್ರದೇಶಗಳಲ್ಲಿ ನಡೆಯುವ ಮೋದಿ ಫೆಸ್ಟ್ ನಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT