ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಸಂಘದಿಂದ ಮನವಿ

Last Updated 23 ಮೇ 2017, 11:23 IST
ಅಕ್ಷರ ಗಾತ್ರ

ಕುಣಿಗಲ್: ‘ಕುಣಿಗಲ್ ತಾಲ್ಲೂಕಿಗೆ ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ರಾಜ್ಯ ರೈತಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು  ಹುಲಿಯೂರುದುರ್ಗದಿಂದ ಪಟ್ಟಣದ ತಾಲ್ಲೂಕು ಕಚೇರಿವರೆಗೆ ರ್‍್ಯಾಲಿಯಲ್ಲಿ ಆಗಮಿಸಿ ಉಪವಿಭಾಗಾಧಿಕಾರಿ ತಬ್ಸಮ್ ಜಹೇರಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಹುಲಿಯೂರುದುರ್ಗದಲ್ಲಿ ಸೋಮವಾರ ಬೆಳಿಗ್ಗೆ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ಸಂಘಟಿತರಾದ ನೂರಾರು ಕಾರ್ಯಕರ್ತರು ಬೈಕ್ ರ್‍್ಯಾಲಿ ಮೂಲಕ ಮೆರವಣಿಗೆ ಹೊರಟು ಕುಣಿಗಲ್‌ಗೆ ಬಂದು ಹುಚ್ಚಮಾಸ್ತಿಗೌಡವೃತ್ತದ ಬಳಿ ಪ್ರತಿಭಟನಾ ಸಭೆ ನಡೆಸಿದರು.

ಆನಂದ್ ಪಟೇಲ್ ಮಾತನಾಡಿ, ‘ತಾಲ್ಲೂಕಿನಲ್ಲಿ ನೀರಾವರಿ ಯೋಜನೆಗೆ ರೈತರ ಜಮೀನು ವಶ ಪಡಿಸಿಕೊಳ್ಳಲಾಗಿದೆ. ಪರಿಹಾರ ನೀಡದೆ ಕಾಲುವೆ ಕಾಮಗಾರಿ ಮಾಡಲಾಗಿದೆ. ಯೋಜನೆ ಹಣದಲ್ಲಿ ಬಹುಪಾಲು ಗುತ್ತಿಗೇದಾರರಿಗೆ ಸೇರಿದೆ. ಜಮೀನು ಕಳೆದುಕೊಂಡ ರೈತರಿಗೆ ಪರಿಹಾರವೂ ಇಲ್ಲಾ, ಕಾಮಗಾರಿಯೂ ಪೂರ್ಣವಾಗಿಲ್ಲ
ಜೊತೆಗೆ ಹನಿ ನೀರು ಸಹ ರೈತರ ಜಮೀನಿಗೆ ಹರಿದಿಲ್ಲ’ ಎಂದು ಆರೋಪಿಸಿದರು.

‘ಶ್ರೀರಂಗ ಏತಾ ನೀರಾವರಿ ಯೋಜನೆಯಿಂದಾಗಿ ತಾಲ್ಲೂಕಿಗೆ ಹಾಗೂ ಮಾಗಡಿಗೆ ನೀರು ಹರಿಯುವುದಿಲ್ಲ. ಹಣ ಮಾತ್ರ ಖರ್ಚಾಗುತ್ತದೆ’ ಎಂದು ಅವರು ಹೇಳಿದರು.
ಕಿತ್ತಾನಾಮಂಗಲದ ಸಿದ್ದರಾಮ ಚೈತನ್ಯ ಸ್ವಾಮೀಜಿ ರೈತ ಸಂಘದ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ತಬ್ಸಮ್ ಜಹೇರಾ, ‘ನೀರಾವರಿ ಯೋಜನೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ವಿತರೆಣೆಗೆ ಕ್ರಮತೆಗೆದುಕೊಳ್ಳುವ ಭರವಸೆ ನೀಡಿದರು. ನೀರಾವರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವುದಾಗಿ’ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT