ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಅಭಿವೃದ್ಧಿಗೆ ನರೇಗಾ ವರದಾನ

Last Updated 23 ಮೇ 2017, 5:05 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆ  ವರದಾನವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮಡುವಿನಕೋಡಿ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಎಸ್.ಟಿ.ಜವರೇಗೌಡ ಹೇಳಿದರು.

ತಾಲ್ಲೂಕಿನ ಮಡುವಿನಕೋಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಈ ಯೋಜನೆಯ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಕೋಟಿ–ಕೋಟಿ ಅನುದಾನ ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಶೌಚಾಲಯ ನಿರ್ಮಾಣ, ಜಾನುವಾರು ಕೊಟ್ಟಿಗೆ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಆಟದ ಮೈದಾನ ನಿರ್ಮಾಣ, ಹೊಲ–ಗದ್ದೆಗಳಿಗೆ ಹೋಗುವ ಬಂಡಿ ರಸ್ತೆ ನಿರ್ಮಾಣ, ಕೆರೆ ಹೂಳೆತ್ತುವ ಕಾಮಗಾರಿ, ತೋಟದ ಅಭಿವೃದ್ಧಿ, ಮಳೆ ನೀರು ಸಂರಕ್ಷಣೆಗೆ ಚೆಕ್ ಡ್ಯಾಂ ನಿರ್ಮಾಣ ಸೇರಿದಂತೆ ಹಲವು  ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು.

ಯೋಜನೆಯು ಯಶಸ್ವಿಯಾಗಬೇಕಾದರೆ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.ಗ್ರಾ.ಪಂ. ಅಧ್ಯಕ್ಷೆ ಜಯಮ್ಮ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ಪುರುಷೋತ್ತಮ್, ಕಾರ್ಯದರ್ಶಿ ನಾಗರತ್ನಾ, ಸದಸ್ಯರಾದ ನವೀನ್, ಕುಮಾರ್, ವಿಜಯ್, ಸೋಮಣ್ಣ, ಕಲ್ಪನಾ, ದೀಪಿಕಾ, ಲಕ್ಷ್ಮಮ್ಮ, ಸಾವಿತ್ರಮ್ಮ, ಸಾಮಾಜಿಕ ಲೆಕ್ಕಪರಿಶೋಧಕ ನವೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT