ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನ ಮ್ಯಾಂಚೆಸ್ಟರ್‌ನಲ್ಲಿ ಬಾಂಬ್ ಸ್ಫೋಟ: 19 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

Last Updated 23 ಮೇ 2017, 5:47 IST
ಅಕ್ಷರ ಗಾತ್ರ

ಲಂಡನ್: ಅಮೆರಿಕದ ಪಾಪ್‌ ಗಾಯಕಿ ಅರಿಯಾನಾ ಗ್ರಾಂಡೆ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದ ಬ್ರಿಟನ್‌ನ ಮ್ಯಾಂಚೆಸ್ಟರ್‌ನ ಅರೆನಾ ಕ್ರೀಡಾಂಗಣದ ಮುಂಭಾಗ ಸೋಮವಾರ ರಾತ್ರಿ ಬಾಂಬ್‌ ಸ್ಫೋಟಿಸಿದ್ದು, ಘಟನೆಯಲ್ಲಿ 19 ಜನ ಸಾವಿಗೀಡಾಗಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಅರಿಯಾನಾ ಗ್ರಾಂಡೆ ಅವರ ಸಂಗೀತ ಕಾರ್ಯಕ್ರಮ ವೇಳೆ ಘಟನೆ ನಡೆದಿದ್ದು, ಇದೊಂದು ಉಗ್ರರ ದುಷ್ಕೃತ್ಯ. ಗುಪ್ತಚರ ಸಂಸ್ಥಯೊಂದಿಗೆ ಸಂಪರ್ಕದಲ್ಲಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಸೇರಿದ್ದ ಜನ ಸಮೂಹ.

ಪ್ರಧಾನಿ ಖಂಡನೆ
ಉಗ್ರರ ಈ ಕೃತ್ಯವನ್ನು ಖಂಡಿಸಿರುವ ಬ್ರಿಟನ್‌ ಪ್ರಧಾನಿ ತೆರೇಸಾ ಮೇ ಅವರು, ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ. ತಮ್ಮ ಪಕ್ಷದ ಚುನಾವಣಾ ಪ್ರಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಹೇಳಿದ್ದಾರೆ. ಸರ್ಕಾರ ಘಟನೆಯ ಪೂರ್ಣ ತನಿಖೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಘಟನಾ ಸ್ಥಳದ ಪರಿಶೀಲನೆ ನಡೆಸಿರುವ ಮ್ಯಾಂಚೆಂಸ್ಟರ್‌ ಅರೇನಾದ ಪೊಲೀಸರು, ಸ್ಫೋಟ ಘಟನೆಯಲ್ಲಿ 19 ಜನ ಮೃತಪಟ್ಟಿದ್ದಾರೆ, 50 ಮಂದಿ ಗಾಯಗೊಂಡಿದ್ದಾರೆ. ಉಗ್ರರ ಕೃತ್ಯದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಪಾಪ್‌ ಗಾಯಕಿ ಅರಿಯಾನಾ ಗ್ರಾಂಡೆ

ಇದು ಆತ್ಮಹತ್ಯಾ ಬಾಂಬ್‌ ದಾಳಿಯೂ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

‘ನನ್ನ ಹೃದಯಕ್ಕೆ ಘಾಸಿಯಾಗಿದೆ. ನಾನು ಕ್ಷಮೆಯಾಚಿಸುತ್ತೇನೆ. ನನಗೆ ಪದಗಳೇ ಬರುತ್ತಿಲ್ಲ’ ಎಂದು ನೋವು ವ್ಯಕ್ತಪಡಿಸಿ ಪಾಪ್‌ ಗಾಯಕಿ ಅರಿಯಾನಾ ಗ್ರಾಂಡೆ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT