ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್ ತಾಲ್ಲೂಕಿನ ಅಭಿವೃದ್ಧಿಗೆ ಆದ್ಯತೆ: ಶಿವಣ್ಣ

Last Updated 23 ಮೇ 2017, 10:26 IST
ಅಕ್ಷರ ಗಾತ್ರ

ಆನೇಕಲ್: ನೀರು,ವಿದ್ಯುತ್ ಹಾಗೂ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಬಿ. ಶಿವಣ್ಣ ತಿಳಿಸಿದರು. ಆನೇಕಲ್ ತಾಲ್ಲೂಕಿನ ವಣಾಕನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ₹1.50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನ ಎಲ್ಲ ಗ್ರಾಮಗಳ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ಮಾಡಿ ಸಜ್ಜುಗೊಳಿಸಲು ಕಾರ್ಯ ಯೋಜನೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಶೇ 75ಕ್ಕೂ ಹೆಚ್ಚು ರಸ್ತೆಗಳು ಡಾಂಬರೀಕರಣವಾಗಿವೆ. ಉಳಿಕೆ ರಸ್ತೆಗಳನ್ನು ಇನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದರು.

ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುವೆಂಪು ನಗರ, ಮೌಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಣಾಕನಹಳ್ಳಿಯ ₹1.40 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಿ.ವಿ. ರೆಡ್ಡಿ, ಮಾಜಿ ಅಧ್ಯಕ್ಷ ಸೋಮಶೇಖರರೆಡ್ಡಿ, ಸದಸ್ಯರಾದ ಶಶಿರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಮುಖಂಡರಾದ ಮುನಿರಾಜು,  ಮುನಿನಾರಾಮರೆಡ್ಡಿ  ಪಿಳ್ಳಪ್ಪ, ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಪುಷ್ಪರಾಜು ಶ್ರೀನಿವಾಸ್, ವಾಸು,  ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT