ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಕಲ್ಯಾಣ ಮಂಡಳಿ ರಚನೆ ಅಗತ್ಯ

Last Updated 24 ಮೇ 2017, 5:01 IST
ಅಕ್ಷರ ಗಾತ್ರ

ದಾವಣಗೆರೆ: ಅಡುಗೆ ಕೆಲಸ ಮಾಡುವವರು ಹಾಗೂ ಸಹಾಯಕರು ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದು, ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಎಚ್‌.ಕೆ.ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ರೋಟರಿ ಬಾಲಭವನದಲ್ಲಿ ಮಂಗಳವಾರ ರಾಜ್ಯ ಅಡುಗೆ ಕೆಲಸ ಮಾಡುವವರ, ಸಹಾಯಕರ ಹಾಗೂ ಅಸಂಘಟಿತ ಕಾರ್ಮಿಕರ ಸಂಘ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಯಲ್ಲಿ ಮಾತನಾಡಿದರು.

‘ಹೋರಾಟ, ಚಳವಳಿಗಳಿಂದ ಮಾತ್ರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಅಡುಗೆ ಕೆಲಸ ಮಾಡುವವರು ಹಾಗೂ ಸಹಾಯಕರು ಸಂಘಟಿತರಾಗಿ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಪ್ರತಿಭಟನೆ, ಧರಣಿ ನಡೆಸಬೇಕು’ ಎಂದು ಕಿವಿಮಾತು ಹೇಳಿದರು.

ದೇಶದಲ್ಲಿ 43 ಕೋಟಿಗೂ ಹೆಚ್ಚು ಮಂದಿ ಅಸಂಘಟಿತ ವಲಯಕ್ಕೆ ಸೇರಿದ ಕಾರ್ಮಿಕರಿದ್ದು, ಅವರಲ್ಲಿ ಅಡುಗೆ ತಯಾರಕರು ಹಾಗೂ ಸಹಾಯಕರೂ ಸೇರಿದ್ದಾರೆ. ಈ ವರ್ಗ ಇಎಸ್‌ಐ, ಪಿಎಫ್‌, ಪಿಂಚಿಣಿ ಸೇರಿದಂತೆ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಹಕ್ಕುಗಳನ್ನು ಪಡೆಯಲು ಜಾಗೃತಿ ಮೂಡಬೇಕು ಎಂದು ಸಲಹೆ ನೀಡಿದರು.

ಮದುವೆ ಸೇರಿದಂತೆ ಶುಭ ಸಮಾರಂಭಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಹೀಗೆ ವೆಚ್ಚವಾಗುವ ಹಣದಲ್ಲಿ ಸೆಸ್‌ ಸಂಗ್ರಹಿಸಿ ಕಲ್ಯಾಣ ಮಂಡಳಿ ಸ್ಥಾಪಿಸ
ಬೇಕು. ಇದರಿಂದ ಅಡುಗೆ ತಯಾರಕರ ಹಾಗೂ ಸಹಾಯಕರ ಮಕ್ಕಳ ಶಿಕ್ಷಣ, ಆರೋಗ್ಯ, ವಿವಾಹ ಸೇರಿದಂತೆ ಹಲವು ಉದ್ದೇಶಗಳಿಗೆ ಆರ್ಥಿಕ ನೆರವು ನೀಡಲು ಸಹಕಾರಿಯಾಗುತ್ತದೆ ಎಂದರು.

ಕಾರ್ಮಿಕ ಮುಖಂಡ ರವಿಕುಮಾರ್ ಮಾತನಾಡಿ, ‘ಅಡುಗೆ ತಯಾರಕರು ಹಾಗೂ ಸಹಾಯಕರಿಗೆ ವರ್ಷಪೂರ್ತಿ ಕೆಲಸ ಸಿಗದೆ ಜೀವನ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ.

ಅಡುಗೆ ತಯಾರಕಲ್ಲಿ ಒಗ್ಗಟ್ಟಿನ ಕೊರತೆಯಿದ್ದು, ಸಂಘಟಿತರಾಗಿ ಹಕ್ಕುಗಳಿಗೆ ಹೋರಾಟ ನಡೆಸಬೇಕು ಎಂದರು. ಅಡುಗೆ ತಯಾರಕರು ಹಾಗೂ ಸಹಾಯಕರ ವೃತ್ತಿ ಅಪಾಯಕಾರಿ ಯಾಗಿದ್ದು, ಬೆಂಕಿ ಅನಾಹುತಗಳಿಗೆ ಸಿಕ್ಕು ಪ್ರಾಣ ಕಳೆದುಕೊಂಡಿದ್ದಾರೆ.

ಸುಟ್ಟ ಗಾಯಗಳಿಂದ ಶಾಶ್ವತ ಅಂಗವೈಕಲ್ಯ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಪರಿಹಾರ ನೀಡುವ ಯೋಜನೆ ಜಾರಿಗೊಳಿಸಬೇಕು ಎಂದರು. ಸಂಘದ ಸತ್ಯಾ ಸಂದಾಚಾರ್, ಬಿ.ಜಿ.ಶಂಕರರಾವ್, ಕೆ.ಎಚ್‌.ರಂಗನಾಥ್, ಚೌಡಪ್ಪ, ಪ್ರಶಾಂತ್ ಬಾದ್ರಿ, ಮಂಜುನಾಥ್‌, ರಂಗಯ್ಯ, ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT