ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 17 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

Last Updated 24 ಮೇ 2017, 5:31 IST
ಅಕ್ಷರ ಗಾತ್ರ

ಹೊಸದುರ್ಗ: ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ₹ 17 ಕೋಟಿ ವೆಚ್ಚದಲ್ಲಿ ತಾಲ್ಲೂಕಿನ ವಿವಿಧ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ತಿಳಿಸಿದರು.ತಾಲ್ಲೂಕಿನ ಬಾಗೂರು ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಉದ್ಘಾಟನೆ ಹಾಗೂ ₹ 2.56 ಕೋಟಿ ವೆಚ್ಚದ ಬಾಗೂರು- ದೊಡ್ಡರಂಗಯ್ಯನಹಟ್ಟಿ-ಐಲಾಪುರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆ ನೀರಾವರಿ ಇಲಾಖೆಯಿಂದ ಎಸ್‌ಸಿಪಿ ಯೋಜನೆ ಅಡಿಯಡಿ ₹ 30 ಲಕ್ಷ ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಲಾಗಿದೆ. ₹ 12 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗಿದೆ. ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆ ತ್ವರಿತಗತಿಯಲ್ಲಿ ಆಗುತ್ತಿದೆ. ಬಾಗೂರಿನ ಎರಡು ಕೆರೆಗಳಿಗೆ ಭದ್ರಾ ನೀರು ಹರಿಸಲಾಗುವುದು.

ಹೀಗಾಗಿ ಕೆರೆಯ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ತಾಲ್ಲೂಕಿನಲ್ಲಿ ಗೋಕಟ್ಟೆ, ಚೆಕ್‌ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳು ಹೆಚ್ಚಾಗಿ ಆಗಿವೆ. ಇದರಿಂದ ಅಂತರ್ಜಲಮಟ್ಟ ವೃದ್ಧಿಯಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿಲ್ಲ. ಆದರೂ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ಕುಡಿಯುವ ನೀರಿನಲ್ಲಿ ಫ್ಲೋರೈಡ್ ಹೆಚ್ಚಿರುವ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ 100  ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ.  ₹ 13 ಕೋಟಿ ವೆಚ್ಚದಲ್ಲಿ  ವಿವಿಧ ಗ್ರಾಮಗಳಿಗೆ ನಿರಂತರ ಜ್ಯೋತಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ಗ್ರಾ.ಪಂ.ಅಧ್ಯಕ್ಷ ಲೋಹಿತ್‌, ಉಪಾಧ್ಯಕ್ಷೆ ವರಲಕ್ಷ್ಮಿ, ಸದಸ್ಯ ತಿಪ್ಪಣ್ಣ, ಪಿಡಿಒ ವಿಶ್ವನಾಥ್‌, ಜಿಲ್ಲಾ ಪಂಚಾಯ್ತಿ ಸದಸ್ಯರಾದ ವಿಶಾಲಾಕ್ಷಿ ನಟರಾಜ್, ಕೆ.ಅನಂತ್, ವಿಜಯಲಕ್ಷ್ಮಿ ಪ್ರಕಾಶ್‌, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶಾಂತಲಾ ಗಿರೀಶ್, ಸದಸ್ಯರಾದ ಮಲ್ಲಿಕಾರ್ಜುನ್, ಕೆಡಿಪಿ ಸದಸ್ಯ ಈಶ್ವರಪ್ಪ, ಗುತ್ತಿಗೆದಾರ ರೇವಣ್ಣ, ಚಿಕ್ಕಯ್ಯಗಟಿ ಸುರೇಶ್‌, ಜಿ.ಆರ್‌.ಮಂಜುನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT