ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಸುವ ಭರವಸೆ: ಪ್ರತಿಭಟನೆ ಹಿಂದಕ್ಕೆ

Last Updated 24 ಮೇ 2017, 6:03 IST
ಅಕ್ಷರ ಗಾತ್ರ

ಸುರಪುರ:  ತಾಲ್ಲೂಕಿನ ಸೂಗೂರ ಗ್ರಾಮ ಪಂಚಾಯಿತಿಯ ವಿವಿಧ ಯೋಜನೆಗಳಡಿ ಭ್ರಷ್ಟಾಚಾರ ನಡೆದಿದ್ದು ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಸೋಮವಾರ ಆರಂಭಿಸಿದ್ದ ಧರಣಿಯನ್ನು ಮಂಗಳವಾರ ಹಿಂಪಡೆದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಸುರೇಶ ಅಂಕಲಗಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾ ಹಕ ಅಧಿಕಾರಿ ಚಂದ್ರಶೇಖರ ಪವಾರ್‌ ಅವರು ರೈತರೊಂದಿಗೆ ಚರ್ಚಿಸಿದರು. ಧರಣಿ ಹಿಂಪಡೆಯುವಂತೆ ಮನ ವೊಲಿಸಿದರು.

ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಚಿನ್ನಾಕಾರ ಮಾತನಾಡಿ, ‘ಪ್ರತಿ ಬಾರಿ ಪ್ರತಿಭಟನೆ ನಡೆದಾಗಲೂ ಅಧಿಕಾರಿಗಳು ಭರವಸೆ ನೀಡಿ ಪ್ರತಿಭಟನೆ ನಿಲ್ಲಿಸುತ್ತಾರೆ. ಇದರಿಂದ ಪ್ರತಿಭಟನೆ ಉದ್ದೇಶ ಈಡೇರುವುದಿಲ್ಲ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ  ಅಧಿಕಾರಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ.

ಲಿಖಿತ ಭರವಸೆ ನೀಡಿ. ಒಂದು ವಾರದೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.‘ಒಂದು ವಾರದೊಳಗೆ ಸುಗೂರ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡಲಾಗುವುದು.

ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಕಾಮಗಾರಿಗಳನ್ನು ಬುಧವಾರದಿಂದ ಆರಂಭಿಸಲಾಗು ವುದು. ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿಸಲಾಗುವುದು. ತಪ್ಪಿಸ್ಥರೆಂದು ಕಂಡುಬಂದಲ್ಲಿ ಕ್ರಮ ಜರುಗಿಸ ಲಾಗುವುದು’ ಎಂಬ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್‌ ಭರವಸೆ ನೀಡಿದರು. ರೈತರು ಧರಣಿ ಹಿಂಪಡೆದರು.

ತಾಲ್ಲೂಕು ಘಟಕದ ಅಧ್ಯಕ್ಷ ಧರ್ಮಣ್ಣ ದೊರಿ, ಗೌರವಾಧ್ಯಕ್ಷ ನಂದಣ್ಣ ವಾರಿ, ವೆಂಕೋಬ ಪಾಟೀಲ, ಶಿವರಾಜ ದೊರಿ, ರಮನಯ್ಯನಾಯಕ, ದಂಡಪ್ಪ ಹುಲಕಲ್, ರಾಮುನಾಯಕ ದೊರಿ, ಶಿವರಾಜ ಕರಿಗುಡ್ಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT