ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಖಾತರಿ ಕೆಲಸಕ್ಕೆ ಆಗ್ರಹಿಸಿ ಧರಣಿ

Last Updated 24 ಮೇ 2017, 6:06 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಹೊತಪೇಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ವಹಿಸಲು ಸಿದ್ಧರಿದ್ದರೂ ಸಹ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಬ್ ಕಾರ್ಡ್ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಕೃಷಿಕೂಲಿಕಾರ ಸಂಘದ ಮುಖಂಡರು ಮತ್ತು ಸದಸ್ಯರು ಗ್ರಾಮ ಪಂಚಾಯಿತಿ ಕಚೇರಿ ಎದುರು ಈಚೆಗೆ ಪ್ರತಿಭಟನೆ ನಡೆಸಿದರು.

‘ಬಡ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಅನಿವಾರ್ಯವಾಗಿ ನಗರ ಪ್ರದೇಶ ಗಳಿಗೆ ಗುಳೆ ಹೋಗುತ್ತಿದ್ದಾರೆ. ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನಿರ್ಮಿಸಲು ಸಾಕಷ್ಟು ಅವಕಾಶವಿದ್ದರೂ ಸಹ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೆಲಸ ನೀಡುತ್ತಿಲ್ಲ. ಬ್ಯಾಂಕ್ ಖಾತೆ ತೆರೆಯಲು ಮುಂದಾಗುತ್ತಿಲ್ಲ.

ಜಾಬ್ ಕಾರ್ಡ್ ನೀಡಲು ನೆಪ ಹೇಳುತ್ತಿದ್ದಾರೆ’ ಎಂದು ಕೃಷಿಕೂಲಿಕಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಾವಲಸಾಬ್ ನದಾಫ್ ಆಕ್ರೊಶ ವ್ಯಕ್ತಪಡಿಸಿದರು. ಕಾರ್ಮಿಕ ಮುಖಂಡರಾದ ಮಲ್ಲಯ್ಯ ಪೊಲಂಪಲ್ಲಿ, ಹಣಮಂತ ಗೋನಾಲ, ಶಂಕ್ರೆಪ್ಪ ದೋರನಹಳ್ಳಿ, ಸವಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT