ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ರಂದು ಬೀದರ್‌ಗೆ ಮುಖ್ಯಮಂತ್ರಿ ಭೇಟಿ

Last Updated 24 ಮೇ 2017, 6:09 IST
ಅಕ್ಷರ ಗಾತ್ರ

ಬೀದರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 27 ರಂದು ಬೀದರ್‌ನ ವಾಯುನೆಲೆಗೆ ಭೇಟಿ ನೀಡಲಿದ್ದಾರೆ. ವಿಶೇಷ ವಿಮಾನದ ಮೂಲಕ ಅಂದು ಬೆಳಿಗ್ಗೆ 11 ಗಂಟೆಗೆ ಬೀದರ್‌ ವಾಯುನೆಲೆಗೆ ಬರುವರು. ಬೆಳಿಗ್ಗೆ 11.10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.

ಕಲಬುರ್ಗಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಡೆಯಲಿರುವ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಲೋಕಾರ್ಪಣೆ ಹಾಗೂ ಇನ್ಫೋಸಿಸ್ ಸಂಸ್ಥೆಯಿಂದ ನಿರ್ಮಿಸಲಾಗುತ್ತಿರುವ ಧರ್ಮಶಾಲೆ ಕಟ್ಟಡದ ಶಿಲಾನ್ಯಾಸ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 1ಕ್ಕೆ ಕಲಬುರ್ಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಿರುವ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30ಕ್ಕೆ ಕಲಬುರ್ಗಿಯ ಇಂದಿರಾ ಸ್ಮಾರಕ ಭವನದ ಎದುರು ಮಾಜಿ ಉಪಪ್ರಧಾನಿ ಬಾಬು ಜಗಜೀವನರಾಂ ಪುತ್ಥಳಿ ಅನಾವರಣ ಮಾಡುವರು. ನಂತರ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಸಂಜೆ 4.30ಕ್ಕೆ ಕಲಬುರ್ಗಿಯಿಂದ ಹೊರಟು ಸಂಜೆ 5.05ಕ್ಕೆ ಬೀದರ್ ವಾಯುನೆಲೆಗೆ ಬರುವರು. ಸಂಜೆ 5.15ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT