ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದ ಪ್ರಧಾನಿ ಪ್ರಚಂಡ ರಾಜೀನಾಮೆ

Last Updated 24 ಮೇ 2017, 12:00 IST
ಅಕ್ಷರ ಗಾತ್ರ

ಕಾಠ್ಮಂಡು: ಆಡಳಿತಾರೂಢ ಮಿತ್ರಪಕ್ಷ ನೇಪಾಳಿ ಕಾಂಗ್ರೆಸ್‌ ಜತೆ ಮಾಡಿಕೊಂಡ ಒಪ್ಪಂದದ ಅನ್ವಯ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ತಮ್ಮ ಹುದ್ದೆಗೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ನೇಪಾಳಿ ಕಾಂಗ್ರೆಸ್ ಪಕ್ಷದವರಿಗೆ ಹುದ್ದೆ ಹಸ್ತಾಂತರಿಸುವ ಸಲುವಾಗಿ ಅವರು ಈ ಕ್ರಮ ಕೈಗೊಂಡಿದ್ದಾರೆ. ದೇಶದ ಜನತೆಯನ್ನುದ್ದೇಶಿಸಿ ಟಿವಿಯಲ್ಲಿ ನೇರ ಭಾಷಣ ಮಾಡಿದ ವೇಳೆ ಅವರು ನಿರ್ಧಾರ ಪ್ರಕಟಿಸಿದ್ದಾರೆ. ನೇಪಾಳದ 39ನೇ ಪ್ರಧಾನಿಯಾಗಿ ಆಯ್ಕೆಯಾಗಿದ್ದ 62 ವರ್ಷದ ಪ್ರಚಂಡ ಅವರು ಕಳೆದ 9 ತಿಂಗಳಿನಿಂದ ನೇಪಾಳದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದಾರೆ.

2016ರ ಆಗಸ್ಟ್ 3ರಂದು ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೆರ್ ಬಹಾದುರ್ ದೇವುಬಾ ಅವರ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಮ್ಯೂನಿಸ್ಟ್ ಪಾರ್ಟಿ ಆಫ್ ನೇಪಾಳ (ಸಿಪಿಎನ್) ಮುಖ್ಯಸ್ಥರಾಗಿದ್ದ ಅವರು ಪ್ರಧಾನಿಯಾಗಿದ್ದರು. ಆ ಸಂದರ್ಭ, 9 ತಿಂಗಳ ನಂತರ ಅಧಿಕಾರ ಹಸ್ತಾಂತರಿಸುವುದಾಗಿ ಅವರು ಒಪ್ಪಂದ ಮಾಡಿಕೊಂಡಿದ್ದರು. 2018ರ ಫೆಬ್ರುವರಿಯಲ್ಲಿ ನಡೆಯಲಿರುವ ಚುನಾವಣೆವರೆಗೂ ಅಧಿಕಾರ ಹಸ್ತಾಂತರಿಸುವ ಮೂಲಕ ಸರದಿಯಲ್ಲಿ ಆಡಳಿತ ನಡೆಸುವ ಬಗ್ಗೆ ಎರಡೂ ಪಕ್ಷಗಳು ಒಪ್ಪಂದ ಮಾಡಿಕೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT