ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಕಾರ್ತಾ ಅವಳಿ ಸ್ಫೋಟಕ್ಕೆ ಮೂರು ಮಂದಿ ಬಲಿ

Last Updated 24 ಮೇ 2017, 16:10 IST
ಅಕ್ಷರ ಗಾತ್ರ

ಜಕಾರ್ತಾ: ಇಂಡೋನೇಷ್ಯಾದ ಪೂರ್ವ ಜಕಾರ್ತಾದಲ್ಲಿ ಬುಧವಾರ ಎರಡು ಕಡೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂರು ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಪೂರ್ವ ಜಕಾರ್ತದ ಬಸ್‌ ನಿಲ್ದಾಣದ ಸಮೀಪ ರಾತ್ರಿ 9 ಗಂಟೆ ಸುಮಾರಿಗೆ ಈ ಸ್ಫೋಟಗಳು ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

‘ಆಗಿರುವ ಹಾನಿಯನ್ನು ಗಮನಿಸಿದರೆ ಸ್ಫೋಟದ ತೀವ್ರತೆ ಹೆಚ್ಚಾಗಿಯೇ ಇದ್ದ ಸಾಧ್ಯತೆ ಇದೆ’ ಎಂದು ಜಕಾರ್ತಾ ಪೊಲೀಸ್ ಮುಖ್ಯಸ್ಥ ಆ್ಯಂಡ್ರಿ ವಿಬೊವೊ ತಿಳಿಸಿದ್ದಾರೆ.

ಮಾನವ ಬಾಂಬರ್‌ಗಳು ಈ ಸ್ಫೋಟ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವ ಉಗ್ರಗಾಮಿ ಸಂಘಟನೆಯೂ ಈವರೆಗೆ ಸ್ಫೋಟದ ಹೊಣೆ ಹೊತ್ತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT