ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶ್ರೀ ಮೂಕಾಂಬಿಕಾ ಕ್ಷೇತ್ರ ಅಭಿವೃದ್ಧಿಗೆ ಕ್ರಮ’

Last Updated 24 ಮೇ 2017, 19:30 IST
ಅಕ್ಷರ ಗಾತ್ರ
ಕುಂದಾಪುರ (ಉಡುಪಿ ಜಿಲ್ಲೆ): ‘ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರವನ್ನು ದಕ್ಷಿಣ ಭಾರತದಲ್ಲಿಯೇ ಮುಂಚೂಣಿಯ ಕ್ಷೇತ್ರವಾಗಿಸಲು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು.
 
ಕ್ಷೇತ್ರದ ಶಾಸಕರು, ವ್ಯವಸ್ಥಾಪನಾ ಮಂಡಳಿ ಹಾಗೂ  ಭಕ್ತರ ಅಭಿಪ್ರಾಯಗಳನ್ನು ಪಡೆದುಕೊಂಡು ಸಮಗ್ರ ಅಭಿವೃದ್ಧಿಯ ನೀಲ ನಕ್ಷೆಯನ್ನು ರೂಪಿಸಲಾಗುವುದು’ ಎಂದು ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
 
ಬುಧವಾರ ಕೊಲ್ಲೂರಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ  ಮಾತನಾಡಿದರು. ‘ಅಂದಾಜು ₹26 ಕೋಟಿ ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.
 
₹76 ಕೋಟಿ ವೆಚ್ಚದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಸವದತ್ತಿ ಕ್ಷೇತ್ರದಲ್ಲಿ 246 ಕೊಠಡಿಗಳ ವಸತಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ.
 
ರಾಜ್ಯದಲ್ಲಿ ‘ಎ’ ಹಾಗೂ ‘ಬಿ’ ದರ್ಜೆಯ ದೇವಾಲಯಗಳಿಂದ ಬರುವ ಆದಾಯ ಗಳನ್ನು ಬಳಸಿಕೊಂಡು ಅಂದಾಜು ₹400 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು’ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT