ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಚೀನಾ ಸಮುದ್ರದಲ್ಲಿ ಸುನಾಮಿ ಮುನ್ನೆಚ್ಚರಿಕೆ ವ್ಯವಸ್ಥೆಗೆ ಮುಂದಾದ ಭಾರತ

Last Updated 24 ಮೇ 2017, 19:38 IST
ಅಕ್ಷರ ಗಾತ್ರ

ನವದೆಹಲಿ: ವಿವಾದಾತ್ಮಕ ದಕ್ಷಿಣ ಚೀನಾ ಸಮುದ್ರದಲ್ಲಿ ಸುನಾಮಿ ಮುನ್ನೆಚ್ಚರಿಕೆ ವ್ಯವಸ್ಥೆ ಸ್ಥಾಪಿಸುವ ಬಗ್ಗೆ ಭಾರತ ಚಿಂತಿಸುತ್ತಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಪ್ರಾಬಲ್ಯ ಸ್ಥಾಪಿಸಲು ಚೀನಾ ಪ್ರಯತ್ನಿಸುತ್ತಿದೆ. ಹಾಗಾಗಿ ಭಾರತದ ಈ ಯೋಜನೆಗೆ ಭಾರಿ ಪ್ರತಿರೋಧ ಎದುರಾಗುವ ಸಾಧ್ಯತೆ ಇದೆ.

ಆಗ್ನೇಯ ಏಷ್ಯಾ ಮತ್ತು ದಕ್ಷಿಣ ಏಷ್ಯಾ  ದೇಶಗಳಿಗೆ ಸುನಾಮಿ ಎಚ್ಚರಿಕೆ ಕೊಡುವ ವ್ಯವಸ್ಥೆ ಈಗ ಇದೆ. ಆದರೆ ದಕ್ಷಿಣ ಚೀನಾ ಪ್ರದೇಶದ ದೇಶಗಳಿಗೆ ಈ ವ್ಯವಸ್ಥೆ ಇಲ್ಲ ಎಂದು ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ ಎಂ. ರಾಜೀವನ್‌ ಹೇಳಿದ್ದಾರೆ.

ಏಷ್ಯಾ ಮತ್ತು ಆಫ್ರಿಕಾದ ದೇಶಗಳಿಗೆ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಘಟಕದ ಅಧ್ಯಕ್ಷತೆಯನ್ನು ಭಾರತ ಹೊಂದಿದೆ. ಹಾಗಾಗಿ ದಕ್ಷಿಣ ಚೀನಾ ಸಮುದ್ರದಲ್ಲಿ ಮುನ್ನೆಚ್ಚರಿಕೆ ವ್ಯವಸ್ಥೆ ಸ್ಥಾಪಿಸಲು ಭಾರತ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT