ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀನಾ ಬೋರಾ ಹತ್ಯೆ ಪ್ರಕರಣ ತನಿಖಾ ಇನ್‌ಸ್ಪೆಕ್ಟರ್‌ ಪತ್ನಿ ಕೊಲೆ

Last Updated 24 ಮೇ 2017, 19:49 IST
ಅಕ್ಷರ ಗಾತ್ರ

ಮುಂಬೈ : ಶೀನಾ ಬೋರಾ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ತಂಡದಲ್ಲಿದ್ದ  ಪೊಲೀಸ್‌ ಇನ್‌ಸ್ಪೆಕ್ಟರ್‌ ಧ್ಯಾನೇಶ್ವರ್‌ ಗನೋರೆ ಅವರ ಪತ್ನಿ ದೀಪಾಲಿ ಗನೋರೆ (42) ಅವರು ಇಲ್ಲಿನ ಸಾಂತಾಕ್ರೂಜ್‌ ಉಪನಗರದಲ್ಲಿರುವ ಮನೆಯಲ್ಲಿ ಕೊಲೆಯಾಗಿದ್ದಾರೆ.

‘ಧ್ಯಾನೇಶ್ವರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳಿದಾಗ  ಮನೆಗೆ ಒಳಗಿನಿಂದ ಬೀಗ ಹಾಕಿತ್ತು.  ಪತ್ನಿಯ ಮೊಬೈಲ್‌ಗೆ ಕರೆ ಮಾಡಿದರೂ ಪ್ರತಿಕ್ರಿಯೆ ವ್ಯಕ್ತವಾಗದ ಕಾರಣ ಅವರೇ ಬಾಗಿಲು ತೆರೆದು ಒಳಹೋದಾಗ ರಕ್ತದ ಮಡುವಿನಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ದೀಪಾಲಿ ಅವರ ಕುತ್ತಿಗೆಗೆ ಇರಿದು ಕೊಲೆ ಮಾಡಲಾಗಿದೆ’ ಎಂದೂ ಪೊಲೀಸರು ತಿಳಿಸಿದ್ದಾರೆ.

ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಖರ್‌ ಪೊಲೀಸ್‌ಠಾಣೆಯಲ್ಲೇ ಧ್ಯಾನೇಶ್ವರ್‌ ಅವರು ಕೆಲಸ ಮಾಡುತ್ತಿದ್ದಾರೆ.

‘ದೀಪಾಲಿ ಅವರ 21 ವರ್ಷದ ಪುತ್ರ ಮಂಗಳವಾರ ರಾತ್ರಿಯಿಂದ ನಾಪತ್ತೆಯಾಗಿದ್ದು, ಈತನೇ ಈ ಕೃತ್ಯ ಎಸಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ವಕೋಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT