ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗವಾನ್‌ಗೆ ‘ಫಾಲ್ಕೆ ಅಕಾಡೆಮಿ’ ಪ್ರಶಸ್ತಿ

Last Updated 24 ಮೇ 2017, 19:56 IST
ಅಕ್ಷರ ಗಾತ್ರ

ಬೆಂಗಳೂರು: 2017ನೇ ಸಾಲಿನ ‘ದಾದಾ ಸಾಹೇಬ ಫಾಲ್ಕೆ ಅಕಾಡೆಮಿ ಪ್ರಶಸ್ತಿ’ಯು ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಅವರಿಗೆ ದೊರೆತಿದೆ. ಮುಂಬೈನ ‘ದಾದಾ ಸಾಹೇಬ ಫಾಲ್ಕೆ ಸಿನಿಮಾ ಪ್ರತಿಷ್ಠಾನ’ವು ಪ್ರತಿವರ್ಷ ಭಾರತೀಯ ಭಾಷೆಗಳ ಚಿತ್ರರಂಗದ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ.

ಫಾಲ್ಕೆ ಅವರ 148ನೇ ಹುಟ್ಟುಹಬ್ಬದ ಅಂಗವಾಗಿ, ಈ ಪ್ರಶಸ್ತಿಯನ್ನು ಜೂನ್ 1ರಂದು ಮುಂಬೈನಲ್ಲಿ ಪ್ರದಾನ ಮಾಡಲಾಗುವುದು. ದೊರೆ–ಭಗವಾನ್ ಜೋಡಿಯ ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದಾರೆ. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತೆ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿರುವ ಅವರು, 24 ಕಾದಂಬರಿಗಳನ್ನು ಬೆಳ್ಳಿತೆರೆಗೆ ತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT