ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ ಫಲಿತಾಂಶ ವಿಳಂಬ ಸಾಧ್ಯತೆ

Last Updated 24 ಮೇ 2017, 20:03 IST
ಅಕ್ಷರ ಗಾತ್ರ

ನವದೆಹಲಿ: ಕ್ಲಿಷ್ಟ ಪ್ರಶ್ನೆಗಳಿಗೆ ಕೃಪಾಂಕ ನೀಡುವ ಪದ್ಧತಿ ರದ್ದತಿಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಅದನ್ನು ತೆರವುಗೊಳಿಸಲು ಇರುವ ಅವಕಾಶಗಳ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ಪರಿಶೀಲನೆ ನಡೆಸುತ್ತಿದೆ. ಹಾಗಾಗಿ ಈ ಬಾರಿ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದೆ.

ಕೃಪಾಂಕ ಇಲ್ಲದೆಯೇ ಈ ವಾರ ಫಲಿತಾಂಶ ಪ್ರಕಟಿಸಲು ಸಿಬಿಎಸ್‌ಇ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಈ ವರ್ಷ ಕೃಪಾಂಕ ಪದ್ಧತಿ ಮುಂದುವರಿಸಬೇಕು ಎಂದು ಹೈಕೋರ್ಟ್‌ ಹೇಳಿದೆ. ಹಾಗಾಗಿ   ಕೃಪಾಂಕ ನೀಡಿ ಫಲಿತಾಂಶ ಪ್ರಕಟಿಸಬೇಕಾದ ಅನಿವಾರ್ಯಕ್ಕೆ ಸಿಬಿಎಸ್‌ಇ ಸಿಲುಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT